ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟುನಿಟ್ಟಿನ ರಾತ್ರಿ ಕರ್ಫ್ಯೂ ಜಾರಿ

Last Updated 23 ಏಪ್ರಿಲ್ 2021, 4:55 IST
ಅಕ್ಷರ ಗಾತ್ರ

ಕಮಲನಗರ: ಕೋವಿಡ್‌ ನಿಯಂತ್ರಣಕ್ಕಾಗಿ ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.

ಗುರುವಾರ ಬೆಳಿಗ್ಗೆಯಿಂದ ಸಂಜೆವರೆಗೂ ಮುರ್ಕಿ, ತೋರಣಾ, ಠಾಣಾಕುಶನೂರು, ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ದಿಢೀರನೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದ ಹಿನ್ನಲೆಯಲ್ಲಿ ಕೆಲ ಜನರು ತೊಂದರೆ ಅನುಭವಿಸಿದರು.

‘ನ್ಯಾಯಬೆಲೆ ಅಂಗಡಿ, ದಿನಸಿ, ತರಕಾರಿ, ಹಣ್ಣು, ಹಾಲು, ಬೇಕರಿ ಉತ್ಪನ್ನಗಳು, ಮೀನು-ಮಾಂಸ ಮತ್ತು ಪ್ರಾಣಿಗಳ ಮೇವಿನ ಅಂಗಡಿ ಜತೆಗೆ ಕೃಷಿ ನಿರ್ಮಾಣ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆಯಲು ಸರ್ಕಾರ ಅವಕಾಶ ನೀಡಿದೆ. ಉಳಿದೆಲ್ಲಾ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ’ ಎಂದು ಪಿಎಸ್‍ಐ ನಂದಿನಿ ಎಸ್. ತಿಳಿಸಿದರು.

‘ಶಾಲೆ, ಕಾಲೇಜು, ತರಬೇತಿ ಸಂಸ್ಥೆಗಳು ಮುಚ್ಚಿರಲಿವೆ. ಆನ್‍ಲೈನ್ ತರಗತಿಗಳಿಗೆ ಮಾತ್ರ ಅವಕಾಶವಿದೆ. ಆದರೆ, ಕಮಲನಗರ, ಡೋಣಗಾಂವ್, ಮುಧೋಳ (ಬಿ), ಠಾಣಾಕುಶನೂರು ಗ್ರಾಮದ ಕೆಲ ಖಾಸಗಿ ಶಾಲೆಗಳು ನಡೆಯುತ್ತಿವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಪಾಲಕರಾದ ಗಣೇಶ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT