ಶುಕ್ರವಾರ, ಏಪ್ರಿಲ್ 3, 2020
19 °C

ವಿದ್ಯಾರ್ಥಿ ವೇತನ ಪರೀಕ್ಷೆಗೆ 2500 ವಿದ್ಯಾರ್ಥಿಗಳು ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ವಿದ್ಯಾರ್ಥಿ ವೇತನ ಪರೀಕ್ಷೆಗೆ 2500 ವಿದ್ಯಾರ್ಥಿಗಳು ಹಾಜರಾಗಿದ್ದರು.‌

ಪರೀಕ್ಷೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕು ಸೇರಿದಂತೆ ಕಲಬುರ್ಗಿ, ಯಾದಗಿರ, ವಿಜಯಪೂರ, ರಾಯಚೂರ, ದಾವಣಗೆರೆ, ಬಳ್ಳಾರಿ, ಬೆಳಗಾವಿ ಹಾಗೂ ಮಹಾರಾಷ್ಟ್ರದ ಉದಗೀರ್, ಲಾತೂರ್, ನಾಂದೇಡ್ ಮತ್ತು ತೆಲಂಗಾಣದ ಸಂಗಾರೆಡ್ಡಿ, ಹೈದರಾಬಾದ್, ಆಂಧ್ರಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡ ಮಾಧ್ಯಮದ 1300 ವಿದ್ಯಾರ್ಥಿಗಳು ಹಾಗೂ ಆಂಗ್ಲ ಮಾಧ್ಯಮದ 1200 ವಿದ್ಯಾರ್ಥಿಗಳು 100 ನಿಮಿಷದ ಪ್ರಶ್ನೆ ಪತ್ರಿಕೆಯಲ್ಲಿ ಗರಿಷ್ಠ 400 ಅಂಕದ ಭೌತಶಾಸ್ತ್ರ, ಜೀವಶಾಸ್ತ್ರ, ಗಣಿತ, ರಸಾಯನಶಾಸ್ತ್ರ ಸಂಬಂಧಿತ ಎಸ್ಸೆಸ್ಸೆಲ್ಸಿ ಪಠ್ಯಕ್ರಮದ ಪ್ರಶ್ನೆಗಳಿಗೆ ಉತ್ತರಿಸಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಚಾರ್ಯ ಬಸವರಾಜ ಮೊಳಕೀರೆ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಸಿಬ್ಬಂದಿ ಪ್ರವೇಶ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸಿದರು.

ತಾಲ್ಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸಂಜೀವಕುಮಾರ ಜುಮ್ಮಾ, ಧನರಾಜ ಬಂಬುಳಗೆ ಇದ್ದರು. ಪರೀಕ್ಷೆಯಲ್ಲಿ ಮೊದಲ ಶ್ರೇಣಿಯ 11 ವಿದ್ಯಾರ್ಥಿಗಳಿಗೆ ತಲಾ ₹1 ಲಕ್ಷ,  ದ್ವಿತೀಯ ಶ್ರೇಣಿ ಪಡೆಯುವ 200 ವಿದ್ಯಾರ್ಥಿಗಳಿಗೆ ತಲಾ ₹51 ಸಾವಿರ ಮತ್ತು ತೃತೀಯ ಶ್ರೇಣಿ ಪಡೆಯುವ 500 ವಿದ್ಯಾರ್ಥಿಗಳಿಗೆ ತಲಾ ₹21 ಸಾವಿರ ವಿದ್ಯಾರ್ಥಿ ವೇತನ ಸಿಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು