ಶುಕ್ರವಾರ, ಡಿಸೆಂಬರ್ 4, 2020
24 °C
ಆರಂಭವಾದ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್ ಕಾಲೇಜುಗಳು

ವಿದ್ಯಾರ್ಥಿಗಳ ಹಾಜರಾತಿ ವಿರಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಂಡೂರು: ಕೋವಿಡ್ 19 ಹಿನ್ನೆಲೆಯಲ್ಲಿ ಹಲವು ತಿಂಗಳುಗಳ  ಬಿಡುವಿನ ನಂತರ ಸರ್ಕಾರದ ಮಾರ್ಗಸೂಚಿಯಂತೆ ಪದವಿ, ಸ್ನಾತಕೋತ್ತರ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳು ಮಂಗಳವಾರ ಆರಂಭವಾದವು. 

ಕಾಲೇಜು ಆರಂಭದ ಹಿನ್ನೆಲೆಯಲ್ಲಿ ಕಾಲೇಜನ್ನು ಸ್ಯಾನಿಟೈಸ್ ಮಾಡಲಾಯಿತು. ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಯಿತು.

ಹಾಜರಾತಿ ಕಡಿಮೆ: ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರ ಹಾಗೂ ಯಶವಂತನಗರದ ಸಂಡೂರು ಪಾಲಿಟೆಕ್ನಿಕ್ ಕಾಲೇಜಿಗೆ ತಲಾ ಐವರು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಸಂಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಆರಂಭದ ದಿನ 35 ವಿದ್ಯಾರ್ಥಿಗಳು ಹಾಜರಾಗಿದ್ದರು.

ಆದರೆ ಇವರಲ್ಲಿ ಬಹುತೇಕರು ಕೊರೊನಾ ತಪಾಸಣಾ ಪತ್ರ ತಾರದ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡು ಕಾಲೇಜಿಗೆ ಬರುವಂತೆ ಹೇಳಿ ಕಳುಹಿಸಿದ್ದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಹುಚ್ಚೂಸಾಬ್, ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಶರತ್ ತಿಳಿಸಿದರು.

75 ವಿದ್ಯಾರ್ಥಿಗಳಿಗೆ ಟೆಸ್ಟ್ : ಸಂಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ 75 ವಿದ್ಯಾರ್ಥಿಗಳು ಹಾಗೂ ತೋರಣಗಲ್ಲಿನಲ್ಲಿ 72 ವಿದ್ಯಾರ್ಥಿಗಳು ಕೊವಿಡ್ ಟೆಸ್ಟ್‌ಗೆ ಒಳಗಾದರು. ಯಾವ ವಿದ್ಯಾರ್ಥಿಯಲ್ಲಿಯೂ ಪಾಸಿಟಿವ್‌ ಕಂಡು ಬಂದಿಲ್ಲ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಗೋಪಾಲ್‍ರಾವ್ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.