ಭಾನುವಾರ, ಅಕ್ಟೋಬರ್ 20, 2019
27 °C

ನಿತ್ಯ ಕ್ರೀಡೆಗಳಲ್ಲಿ ಪಾಲ್ಗೊಳ್ಳಿ: ಗೀತಾ ಚಿದ್ರಿ

Published:
Updated:
Prajavani

ಬೀದರ್: ‘ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿರಲು ವಿದ್ಯಾರ್ಥಿಗಳು ನಿತ್ಯ ಒಂದು ಗಂಟೆಯಾದರೂ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಸಲಹೆ ಮಾಡಿದರು.

ನಗರದ ಗುರುನಾನಕ ದೇವ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಟೇಬಲ್ ಟೆನಿಸ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮೊದಲು ಮಕ್ಕಳು ಗ್ರಾಮೀಣ ಕ್ರೀಡೆಗಳಾದ ಕುಸ್ತಿ, ಕಬಡ್ಡಿ, ಕೊಕ್ಕೊ, ಓಟದ ಸ್ಪರ್ಧೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳುತ್ತಿದ್ದರು. ಈಗ ಮೊಬೈಲ್‌ಗಳಲ್ಲಿ ಗೇಮ್‌ ಆಡುತ್ತ ಸೋಮಾರಿಗಳಾಗುತ್ತಿದ್ದಾರೆ. ಈ ಮೂಲಕ ದೈಹಿಕ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದ್ದಾರೆ’ ಎಂದು ವಿಷಾದ ವ್ಯಕ್ತಪಡಿಸಿದರು.

‘ಪಾಲಕರು ಮಕ್ಕಳನ್ನು ಓದುವುದಕ್ಕಷ್ಟೇ ಸೀಮಿತಗೊಳಿಸಬಾರದು. ಕ್ರೀಡೆಗಳಲ್ಲಿ ಭಾಗವಹಿಸುವುದಕ್ಕೂ ಅವಕಾಶ ಕೊಡಬೇಕು’ ಎಂದು ಹೇಳಿದರು.
ಗುರುನಾನಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ್ ಮಾತನಾಡಿ,‘ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸಬೇಕು’ ಎಂದು ಹೇಳಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಜ ಪಾಟೀಲ, ಇಲಾಖೆಯ ಬೆಂಗಳೂರಿನ ನಿರ್ದೇಶಕರ ಕಚೇರಿಯ ಸಹಾಯಕ ನಿರ್ದೇಶಕ ಗೋಪಾಲ ಕೃಷ್ಣ ಮಾತನಾಡಿದರು.

ಮುಖಂಡ ಪಂಡಿತ ಚಿದ್ರಿ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರ, ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತರಾವ್‌ ಮೈಲಾರೆ, ಕಾರ್ಯದರ್ಶಿ ವಿಠ್ಠಲದಾಸ ಪ್ಯಾಗೆ, ರಾಜ್ಯ ಪ್ರತಿನಿಧಿ ಚಂದ್ರಕಾಂತ ಶಹಾಬಾದಕರ್, ಉಪಾಧ್ಯಕ್ಷ ನಿಜಾಮೊದ್ದಿನ್, ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಓಂಕಾರ ಸೂರ್ಯವಂಶಿ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಗುರುನಾನಕ ಕಾಲೇಜು ಪ್ರಾಚಾರ್ಯೆ ಆಶಾ ಲಕ್ಕಿ, ಸಂಗನಬಸವ, ಸಿದ್ರಾಮ ಜ್ಯಾಂತಿ, ರೋಗನ್‌, ಸಂಗಮೇಶ ಸೋನಾರ, ನಿರ್ಣಾಯಕರಾದ ಜೈಪ್ರಕಾಶ, ಸಂಜಯ ಜೆಸ್ಸಿ ಇದ್ದರು.

ಪ್ರಾಚಾರ್ಯ ಪಂಢರಿ ಹುಗ್ಗಿ ಮತ್ತು ಚಂದ್ರಕಾಂತ ಗಂಗಶೆಟ್ಟಿ ನಿರೂಪಿಸಿದರು. ಪ್ರಾಚಾರ್ಯ ಬಸವರಾಜ ಸ್ವಾಮಿ ಹೆಡಗಾಪುರ ವಂದಿಸಿದರು.

Post Comments (+)