ಔರಾದ್: ಇಲ್ಲಿಯ ಎಪಿಎಂಸಿ ಬಳಿ ಶುಕ್ರವಾರ ಮನೆ ಮಾಳಿಗೆ ಮೇಲಿಂದ ಬಿದ್ದು ವಿದ್ಯಾರ್ಥಿನಿ ಶೋಭಾ ಸಂತೋಷ್ (16) ಮೃತಪಟ್ಟಿದ್ದು, ಇದು ಸಂಶಯಾಸ್ಪದ ಸಾವು ಎಂದು ಪೋಷಕರು ದೂರು ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಮಂಗಳವಾರ ಇಲ್ಲಿಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಮೃತ ವಿದ್ಯಾರ್ಥಿನಿಯ ಕುರಿತು ಮಾಹಿತಿ ಪಡೆದುಕೊಂಡರು.

ಕಮಲನಗರ ತಾಲ್ಲೂಕಿನ ಬೆಳಕುಣಿ (ಭು) ಗ್ರಾಮದ ಮೃತ ವಿದ್ಯಾರ್ಥಿನಿ ಶೋಭಾ ಕುಸ್ತಿ ಹಾಗೂ ಕಬಡ್ಡಿ ಪಟು. ಔರಾದ್ನಲ್ಲಿ ತರಬೇತಿ ಪಡೆಯುತ್ತಿದ್ದರು. ತಮ್ಮ ಮಗಳ ಸಂಶಯಾಸ್ಪದ ಸಾವು ಎಂದು ಗ್ರಾಮಸ್ಥರು ಹಾಗೂ ಪಾಲಕರು ದೂರಿದ್ದು, ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೂ ಮೊರೆ ಹೋಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.