ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವೇಕಾನಂದರ ಅಧ್ಯಯನ ಮಾಡಿ

Last Updated 23 ಜನವರಿ 2021, 15:04 IST
ಅಕ್ಷರ ಗಾತ್ರ

ಬೀದರ್: ಯುವಕರು ಸ್ವಾಮಿ ವಿವೇಕಾನಂದರ ಕುರಿತು ಅಧ್ಯಯನ ಮಾಡಬೇಕು. ಅವರ ಆದರ್ಶ ಗುಣಗಳನ್ನು ರೂಢಿಸಿಕೊಳ್ಳಬೇಕು ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಜ್ಯೋತಿರ್ಮಯಾನಂದ ಸ್ವಾಮೀಜಿ ಹೇಳಿದರು.

ಇಲ್ಲಿಯ ಭಾರತೀಯ ಕುಟುಂಬ ಯೋಜನಾ ಸಂಘದ ಶಾಖೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಡಿದರು.

ಯುವ ಜನಾಂಗವೇ ದೇಶದ ಆಸ್ತಿಯಾಗಿದೆ. ಹೀಗಾಗಿ ಆರೋಗ್ಯಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೇಂದ್ರ ಸಂಘದ ಮಾಜಿ ಉಪಾಧ್ಯಕ್ಷೆ ಪೂರ್ಣಿಮಾ ಜಿ. ಮಾತನಾಡಿ, ಯುವಕರು ಮಹಾನ್ ವ್ಯಕ್ತಿಗಳ ಜೀವನ ಅರಿಯಬೇಕು. ಪರಿಶ್ರಮದ ಮೂಲಕ ಉಜ್ವಲ ಭವಿಷ್ಯ ಕಟ್ಟಕೊಳ್ಳಬೇಕು ಎಂದು ಹೇಳಿದರು.

ಸಂಘದ ಸ್ಥಳೀಯ ಶಾಖೆಯ ಅಧ್ಯಕ್ಷೆ ಡಾ. ಆರತಿ ರಘು, ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಮಾತನಾಡಿದರು.

ಉತ್ತಮ ಸೇವೆಗಾಗಿ ಮುಖ್ಯಮಂತ್ರಿ ಪದಕಕ್ಕೆ ಪಾತ್ರರಾದ ವೈರ್‍ಲೆಸ್ ವಿಭಾಗದ ಇನ್‍ಸ್ಪೆಕ್ಟರ್ ಮೊಹಮ್ಮದ್ ಮೋಸಿನ್ ಪಟೇಲ್ ಹಾಗೂ ನ್ಯೂಟೌನ್ ಠಾಣೆ ಸಬ್ ಇನ್‍ಸ್ಪೆಕ್ಟರ್ ಸಂತೋಷ ಟಿ. ಅವರನ್ನು ಸನ್ಮಾನಿಸಲಾಯಿತು. ವಿಜಯಲಕ್ಷ್ಮಿ ಹುಡಗೆ ನಿರೂಪಿಸಿದರು. ಅರ್ಜುನ ಚಬುತ್ರೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT