ಅಂಚೆ ಯೋಜನೆಗಳ ಪ್ರಯೋಜನ ಪಡೆಯಿರಿ

7
ಶಾಹೀನ್ ಕಾಲೇಜಿನಲ್ಲಿ ನೂತನ ಅಂಚೆ ಶಾಖೆ ಉದ್ಘಾಟನೆ: ಖೂಬಾ ಸಲಹೆ

ಅಂಚೆ ಯೋಜನೆಗಳ ಪ್ರಯೋಜನ ಪಡೆಯಿರಿ

Published:
Updated:
Deccan Herald

ಬೀದರ್: ‘ಸಾರ್ವಜನಿಕರು ಅಂಚೆ ಇಲಾಖೆಯ ವಿವಿಧ ಯೋಜನೆಗಳ ಪ್ರಯೋಜನ ಪಡೆಯಬೇಕು’ ಎಂದು ಸಂಸದ ಭಗವಂತ ಖೂಬಾ ಸಲಹೆ ಮಾಡಿದರು.

ನಗರದ ಶಹಾಪುರ ಗೇಟ್ ಹತ್ತಿರದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ಆವರಣದಲ್ಲಿ ಬುಧವಾರ ನೂತನ ಅಂಚೆ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.

‘ಅಂಚೆ ಇಲಾಖೆ ಉತ್ತಮ ಸೇವೆಗೆ ಹೆಸರಾಗಿದೆ. ವಿವಿಧ ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ’ ಎಂದು ತಿಳಿಸಿದರು.

‘ಡಿಜಿಟಲ್ ಇಂಡಿಯಾದ ಭಾಗವಾಗಿಯೇ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ಸ್‌ ಪೇಮೆಂಟ್ ಬ್ಯಾಂಕ್ ತೆರೆದಿದೆ. ವಿದ್ಯಾರ್ಥಿಗಳು ಈ ಬ್ಯಾಂಕ್ ಅನ್ನು ಬಳಸಿಕೊಂಡು ನಗದು ರಹಿತ ವ್ಯವಹಾರ ನಡೆಸಬೇಕು’ ಎಂದು ಅಂಚೆ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಕೇಂದ್ರದ ಅಧಿಕಾರಿ ಮಂಗಲಾ ಭಾಗವತ ಹೇಳಿದರು.

‘ಶಾಹೀನ್ ಕಾಲೇಜಿನಲ್ಲಿ ದೇಶದ ವಿವಿಧೆಡೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅಂಚೆ ಇಲಾಖೆಯು ಕಾಲೇಜು ಆವರಣದಲ್ಲಿ ಅಂಚೆ ಶಾಖೆ ತೆರೆದಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಖದೀರ್ ತಿಳಿಸಿದರು.

‘ಅಂಚೆ ಇಲಾಖೆಯು ಎಲ್ಲ ವರ್ಗದ ಜನರನ್ನು ದೃಷ್ಟಿಕೋನದಲ್ಲಿ ಇಟ್ಟುಕೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಜನ ಅವುಗಳ ಲಾಭ ಪಡೆಯಬೇಕು’ ಎಂದು ಹೇಳಿದರು.

ಬೀದರ್ ಅಂಚೆ ಅಧೀಕ್ಷಕ ವಿ. ನರಸಿಂಹರಾವ್ ಅವರು, ಸುಕನ್ಯಾ ಸಮೃದ್ಧಿ, ಉಳಿತಾಯ ಖಾತೆ, ಠೇವಣಿ ಖಾತೆ ಸೇರಿದಂತೆ ಅಂಚೆ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ. ಸಿದ್ರಾಮ, ಅಂಚೆ ನಿರೀಕ್ಷಕ ಇಂದ್ರೇಶ್, ಇಂಡಿಯಾ ಪೋಸ್ಟ್ಸ್‌ ಪೇಮೆಂಟ್ ಬ್ಯಾಂಕ್ ವ್ಯವಸ್ಥಾಪಕ ಮಿರ್ಜಾ ಬೇಗ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !