ಸೋಮವಾರ, ಜುಲೈ 4, 2022
22 °C
ನೈಸರ್ಗಿಕ ಕೃಷಿ ಪದ್ಧತಿ ಪ್ರಚಾರಾಂದೋಲನ

ರೈತ ಉತ್ಪಾದಕ ಗುಂಪಿನಿಂದ ಕೃಷಿಯಲ್ಲಿ ಯಶಸ್ಸು: ತಾರಾಮಣಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ರೈತ ಉತ್ಪಾದಕ ಗುಂಪುಗಳನ್ನು ರಚಿಸುವ ಮೂಲಕ ಕೃಷಿಯಲ್ಲಿ ಯಶಸ್ಸು ಗಳಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಹೇಳಿದರು.

ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ನೈಸರ್ಗಿಕ ಕೃಷಿ ಪದ್ಧತಿ ಪ್ರಚಾರಾಂದೋಲನ ಹಾಗೂ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ನೈಸರ್ಗಿಕ ಕೃಷಿ ಪದ್ಧತಿ ಮೂಲಕ ಕಡಿಮೆ ಖರ್ಚಿನಲ್ಲಿ ಅಧಿಕ ಆದಾಯ ಗಳಿಸಬಹುದು ಎಂದು ತಿಳಿಸಿದರು.
ಕೃಷಿ ಇಲಾಖೆಯು ರೈತರಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಅವುಗಳ ಪ್ರಯೋಜನ ಪಡೆಯಬೇಕು ಎಂದರು.

ರೈತರು ಶುಂಠಿ ಬೆಳೆ ಹಾಗೂ ಆಹಾರ ಸಂಸ್ಕಾರಣಾ ಘಟಕಗಳ ಸ್ಥಾಪನೆಗೆ ಮುಂದಾಗಬೇಕು ಎಂದು ಕೃಷಿ ಇಲಾಖೆಯ ಕೃಷಿ ತಾಂತ್ರಿಕ ಅಧಿಕಾರಿ ವಿಜಯಕುಮಾರ ಸಿರಂಜೆ ಹೇಳಿದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ವಿಶ್ವನಾಥ ಝಿಳ್ಳೆ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಮಲ್ಲೇಶ ಮಾತನಾಡಿದರು. ಕೃಷಿಯಲ್ಲಿ ಸಾಧನೆಗೈದ 10 ರೈತರನ್ನು ಸನ್ಮಾನಿಸಲಾಯಿತು.

ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಸುನೀಲ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕ ಪೇಮದಾಸ, ಪಶು ವಿಜ್ಞಾನಿ ಡಾ. ಅಕ್ಷಯಕುಮಾರ, ಗೃಹ ವಿಜ್ಞಾನಿ ಡಾ. ರಾಜೇಶ್ವರಿ ಇದ್ದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಸ್ವಾಗತಿಸಿದರು. ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ನಿರೂಪಿಸಿದರು.

ಇದಕ್ಕೂ ಮುನ್ನ ರೈತರು ಕೇಂದ್ರದ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ಥೋಮರ್ ಅವರು ರೈತರೊಂದಿಗೆ ನಡೆಸಿದ ಸಂವಾದದ ನೇರ ಪ್ರಸಾರ ವೀಕ್ಷಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕೃಷಿ ವಿಜ್ಞಾನ ಕೇಂದ್ರ, ಆತ್ಮ ಯೋಜನೆ ಹಾಗೂ ಕೃಷಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು