ಭಾನುವಾರ, ಮಾರ್ಚ್ 26, 2023
31 °C

ಪರಿಶ್ರಮದಿಂದ ಉದ್ಯಮದಲ್ಲಿ ಯಶಸ್ಸು: ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮಹಿಳೆಯರು ಶ್ರದ್ಧೆಯಿಂದ ಪರಿಶ್ರಮ ವಹಿಸಿದ್ದಲ್ಲಿ ಉದ್ಯಮದಲ್ಲಿ ಯಶಸ್ಸು ಗಳಿಸಬಹುದು ಎಂದು ಜಿಲ್ಲಾ ಪಂಚಾಯಿತಿಯ ಡಿ.ಆರ್.ಡಿ.ಎ. ಸಹಾಯಕ ಯೋಜನಾ ಅಧಿಕಾರಿ ರಾಜಕುಮಾರ ಪಾಟೀಲ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್. ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯೆಯರಿಗೆ ಆಯೋಜಿಸಿದ್ದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿಯ ಎನ್.ಆರ್.ಎಲ್.ಎಂ. ಜಿಲ್ಲಾ ವ್ಯವಸ್ಥಾಪಕ ಸಂಜುಕುಮಾರ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಮೇಶ ಚಟ್ನಳ್ಳಿ, ಸಿಡಾಕ್ ತರಬೇತಿ ಅಧಿಕಾರಿ ಮಲ್ಲಪ್ಪ ಬಿ. ಮೇತ್ರೆ ಇದ್ದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು