ಸೋಮವಾರ, ಜೂನ್ 27, 2022
26 °C
ಡಾ. ರಾಜಶೇಖರ ಶಿವಾಚಾರ್ಯ ಅಭಿಮತ

ಗುರಿಯಿದ್ದರೆ ಯಶಸ್ಸು ಸಾಧ್ಯ: ಡಾ. ರಾಜಶೇಖರ ಶಿವಾಚಾರ್ಯ ಅಭಿಮತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ನಿರ್ದಿಷ್ಟ ಗುರಿ ಹಾಗೂ ಗುರುವಿನ ಮಾರ್ಗದರ್ಶನವಿದ್ದಲ್ಲಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ನೌಬಾದ್‍ನ ಜ್ಞಾನ ಶಿವಯೋಗಾಶ್ರಮದ ಡಾ. ರಾಜಶೇಖರ ಶಿವಾಚಾರ್ಯ ನುಡಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ವಿವೇಕಾನಂದರಾದದ್ದು ಅವರ ಗುರು ರಾಮಕೃಷ್ಣ ಪರಮಹಂಸರ ಮಾರ್ಗದರ್ಶನದಿಂದ’ ಎಂದು ಹೇಳಿದರು.

‘ಯುವಕರು ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಚಾರಿತ್ರ್ಯ ರೂಪಿಸಿಕೊಳ್ಳಬೇಕು. ಸಮಾಜಮುಖಿಯಾಗಿ ಬಾಳಬೇಕು’ ಎಂದರು.

ಪರಿಷತ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್ ಮಾತನಾಡಿದರು. ಡಾ. ರವೀಂದ್ರ ಎಕಲಾರಕರ್ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜು ಆಡಳಿತಾಧಿಕಾರಿ ಕರ್ನಲ್ ಜಿ.ಕೆ. ಸಿಂಗ್, ಪರಿಷತ್ ನಗರ ಘಟಕದ ಕಾರ್ಯದರ್ಶಿ ವಿಕಾಸ ಚೋರಮಲ್ಲೆ, ಪ್ರವೀಣ ಇದ್ದರು. ಅರವಿಂದ ಸುಂದಾಳಕರ್ ನಿರೂಪಿಸಿದರು. ಶಿವಕಾಂತ ಉಪ್ಪೆ ಸ್ವಾಗತಿಸಿದರು. ಆದಿತ್ಯ ಶೀಲವಂತ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು