ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಮಟ್ಟದಲ್ಲಿ ಲಸಿಕಾಕರಣ ಯಶಸ್ವಿಗೊಳಿಸಿ: ಸಚಿವ ಪ್ರಭು ಚವಾಣ್ ಸೂಚನೆ

Last Updated 13 ಜೂನ್ 2021, 15:54 IST
ಅಕ್ಷರ ಗಾತ್ರ

ಬೀದರ್‌: ಗ್ರಾಮ ಮಟ್ಟದಲ್ಲಿ ಕೋವಿಡ್-19 ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಲು ಇನ್ನಷ್ಟು ಶ್ರಮವಹಿಸಬೇಕು ಎಂದು
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಡಿಯಲ್ಲಿ ವೈದ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದ ಹಾಗೂ ಗ್ರಾಮ ಮಟ್ಟದ ಕಾರ್ಯಪಡೆ ಉತ್ತಮವಾಗಿ ಕೆಲಸ ನಿರ್ವಹಿಸುವಂತೆ ನೋಡಿಕೊಳ್ಳಬೇಕು’ ಎಂದು ಸೂಚನೆ ನೀಡಿದ್ದಾರೆ.

‘ಮೊದಲು ಕೇವಲ ನಗರಗಳಿಗೆ ಮಾತ್ರ ಸೀಮಿತವಾಗಿದ್ದ ಸೋಂಕು ಇದೀಗ ಗ್ರಾಮಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವುದರಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಜಾಗೃತಿ ವಹಿಸಬೇಕು. 3ನೇ ಅಲೆಯ ನಿಯಂತ್ರಣಕ್ಕೆ ಪಂಚಾಯಿತಿಯಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದ್ದಾರೆ.

‘ಲಸಿಕೆಯ ಬಗೆಗಿನ ಜನರ ತಪ್ಪು ಕಲ್ಪನೆಗಳನ್ನು ನಿವಾರಿಸಲು ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸ್ವಸಹಾಯ ಸಂಘಗಳು, ಧಾರ್ಮಿಕ ಮುಖಂಡರ ಸಹಕಾರ ಪಡೆದು, ಜನರಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದ್ದಾರೆ.

‘ಎಲ್ಲ ಪಿಡಿಒಗಳು ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಕೇಂದ್ರ ಸ್ಥಾನದಲ್ಲಿದ್ದು, ಕೆಲಸ ನಿರ್ವಹಿಸಬೇಕು. ಮೊಬೈಲ್ ಫೋನ್‍ ಚಾಲ್ತಿಯಲ್ಲಿಟ್ಟುಕೊಂಡು, ಜನರಿಗೆ ಸ್ಪಂದಿಸಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಗಾ ವಹಿಸಬೇಕು. ಸರಿಯಾಗಿ ಕೆಲಸ ಮಾಡದ ಪಿಡಿಒಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಸಚಿವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT