ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಟೊ ಚಾಲಕರು ಕಡ್ಡಾಯ ಸಂಚಾರಿ ನಿಯಮ ಪಾಲಿಸಿ’

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ ಖಡಕ ಎಚ್ಚರಿಕೆ
Published 7 ಆಗಸ್ಟ್ 2023, 14:45 IST
Last Updated 7 ಆಗಸ್ಟ್ 2023, 14:45 IST
ಅಕ್ಷರ ಗಾತ್ರ

ಕಮಲನಗರ:‘ಸಾರ್ವಜನಿಕರ ಹಿತದೃಷ್ಟಿಯಿಂದ ಆಟೊ ಚಾಲಕರು ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸದೇ ಸಂಚಾರಿ ನಿಯಮ ಪಾಲನೆ ಮಾಡಬೇಕು’ ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ ನಿರ್ಣೆ ಸೂಚಿಸಿದರು.

ಪಟ್ಟಣದ ಪೊಲೀಸ್ ಸ್ಟೇಷನ್ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಆಟೋ ಚಾಲಕರ ಸಭೆಯಲ್ಲಿ ಮಾತನಾಡಿದ ಅವರು, ‘ಆಟೊ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಗಿ ಹೊಂದಿರಬೇಕು. ಅದನ್ನು ಕಾಲಕಾಲಕ್ಕೆ ನವೀಕರಿಸಬೇಕು. ವಾಹನದ ವಿಮೆ ಕಡ್ಡಾಯವಾಗಿ ಪಾವತಿಸಿರಬೇಕು. ವಾಹನದಲ್ಲಿ ಮೂವರಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದುಕೊಂಡು ಹೋಗಬಾರದು’ ಎಂದರು.

ಸಿಪಿಐ ರಾಮಪ್ಪ ಸಾವಳಗಿ ಮಾತನಾಡಿದರು. ಪೊಲೀಸ್ ಸಿಬ್ಬಂದಿ ರಾಜಕುಮಾರ ಸೋನಾರೆ, ಅಜಯ ಠಾಕೂರ, ಶಿವಾನಂದ ಫುಲಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT