ಬೀದರ್: ರೋಟರಿ ಕ್ಲಬ್ ಆಫ್ ಬೀದರ್ ಫೋರ್ಟ್, ಬ್ರಿಮ್ಸ್ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಹಾಗೂ ಕಿಚ್ಚ ಸುದೀಪ್ ಚಾರಿಟಬಲ್ ಸೊಸೈಟಿ ವತಿಯಿಂದ ನಗರದ ಐಎಂಎ ಹಾಲ್‍ನಲ್ಲಿ ಸೆಪ್ಟೆಂಬರ್ 2 ರಂದು ಬೆಳಿಗ್ಗೆ 9ಕ್ಕೆ ರಕ್ತದಾನ ಶಿಬಿರ ನಡೆಯಲಿದೆ.
ಚಿತ್ರನಟ ಸುದೀಪ್ ಅವರ ಜನ್ಮದಿನದ ಪ್ರಯುಕ್ತ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಆಫ್ ಬೀದರ್ ಫೋರ್ಟ್ ಅಧ್ಯಕ್ಷ ಪ್ರೊ. ಎಸ್.ಬಿ. ಚಿಟ್ಟಾ ತಿಳಿಸಿದ್ದಾರೆ.
ಇದನ್ನೂ ಓದಿ:‘ಥ್ಯಾಂಕ್ಯೂ ಬೊಮ್ಮಾಯಿ ಮಾಮ’ ಎಂದ ಕಿಚ್ಚ ಸುದೀಪ್
ಒಬ್ಬರ ರಕ್ತದಾನದಿಂದ ಮೂವರ ಜೀವ ಉಳಿಸಬಹುದಾಗಿದೆ. ಯುವಕರು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ತುರ್ತು ಅವಶ್ಯಕತೆ ಇರುವವರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.