ಭಾನುವಾರ, ಜನವರಿ 17, 2021
20 °C

ಸಂಕ್ಷಿಪ್ತ ಸುದ್ದಿ: ಕಬ್ಬು ದರ ನಿಗದಿ ಸಭೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಬ್ಬು ದರ ನಿಗದಿ: ಸಭೆ ಇಂದು

ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅಧ್ಯಕ್ಷತೆಯಲ್ಲಿ ಜ.2ರಂದು ಬೆಳಿಗ್ಗೆ 11 ಗಂಟೆಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಬ್ಬು ದರ ನಿಗದಿ ಸಭೆ ನಡೆಯಲಿದೆ.
ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿರಬೇಕು ಎಂದು ಪ್ರಕಟಣೆ ತಿಳಿಸಿದೆ.
* * *
ವಿದ್ಯುತ್ ವ್ಯತ್ಯಯ ಇಂದು

ಬೀದರ್‌: 110/11 ಕೆವಿ ಟೌನ್ ಫೀಡರ್ ವ್ಯಾಪ್ತಿಯ ಜನವರಿ 2 ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ನಗರದ ಹಳೆಯ ಆದರ್ಶ ಕಾಲೊನಿ, ಮೊಟೆ ಲೇಔಟ್, ದೇವಿ ಕಾಲೊನಿ, ಶರಣ ನಗರ, ಬಚ್ಚಾ ಲೇಔಟ್, ಶಿವನಗರ ದಕ್ಷಿಣ ಫೀಡರ್‌ ನಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೀದರ್ ವಿಭಾಗದ ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
* * *
ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಜ 4ಕ್ಕೆ

ಬೀದರ್: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಭರಣ ಅಧ್ಯಕ್ಷತೆಯಲ್ಲಿ ಜನವರಿ 4ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

* * *

ಪ್ರಗತಿ ಪರಿಶೀಲನಾ ಸಭೆ 5ಕ್ಕೆ

ಬೀದರ್‌: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷೆ ಡಾ.ಜಯಶ್ರೀ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನವರಿ 5 ರಂದು ಸಂಜೆ 4.30ಕ್ಕೆ ಮಕ್ಕಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಳಿಸಿದ್ದಾರೆ.

***

ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನ

ಬೀದರ್‌: ಎನ್.ಎಚ್.ಎಂ. ಯೋಜನೆಯ ಅಡಿಯಲ್ಲಿ ತಾಲ್ಲೂಕು ಆಶಾ ಮೆಂಟರ್‌ರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಆಯ್ಕೆಗೆ ಆಕ್ಷೇಪಣೆಗಳಿದ್ದಲ್ಲಿ ಜನವರಿ 5ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

***
ತೊಗರಿ ಖರೀದಿ: ನೋಂದಣಿ ಅವಧಿ, ಖರೀದಿ ಅವಧಿ ವಿಸ್ತರಣೆ

ಬೀದರ್‌: ತೊಗರಿ ಖರೀದಿಸಲು ಅನುಕೂಲವಾಗುವಂತೆ ರೈತರ ನೋಂದಣಿ ಅವಧಿಯನ್ನು 2021ರ ಜನವರಿ 30ರ ವರೆಗೆ ಹಾಗೂ ಖರೀದಿ ಅವಧಿಯನ್ನು ಫೆಬ್ರುವರಿ 28ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು