ಬುಧವಾರ, ಜುಲೈ 28, 2021
29 °C

ಭಾನುವಾರ ಲಾಕ್‍ಡೌನ್: ಜಿಲ್ಲಾಧಿಕಾರಿ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜುಲೈ 5 ರಿಂದ ಆಗಸ್ಟ್ 2 ವರೆಗಿನ ಎಲ್ಲ ಭಾನುವಾರ ಜಿಲ್ಲೆಯಲ್ಲಿ ಲಾಕ್‍ಡೌನ್‍ಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆದೇಶಿಸಿದ್ದಾರೆ.

ಅಗತ್ಯ ಸೇವೆ ಹಾಗೂ ಅವಶ್ಯಕ ಸರಕುಗಳ ಸಾಗಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಭಾನುವಾರ ಹೊರತುಪಡಿಸಿ ಉಳಿದ ದಿನಗಳಂದು ರಾತ್ರಿ 8 ಗಂಟೆಯಿಂದ ನಸುಕಿನ ಜಾವ 5 ಗಂಟೆವರೆಗೆ ಲಾಕ್‍ಡೌನ್ ಇರಲಿದೆ ಎಂದು ಹೇಳಿದ್ದಾರೆ.

ಮದ್ಯ ಮಾರಾಟ ನಿಷೇಧ

ಜಿಲ್ಲೆಯಲ್ಲಿ ಜುಲೈ 5 ರಿಂದ ಆಗಸ್ಟ್ 2 ರ ವರೆಗಿನ ಎಲ್ಲ ಭಾನುವಾರ ಮದ್ಯದ ಅಂಗಡಿಗಳನ್ನು ಮುಚ್ಚಿಡಲು ಅಬಕಾರಿ ಉಪ ಆಯುಕ್ತ ಆದೇಶಿಸಿದ್ದಾರೆ. ಈ ಎಲ್ಲ ಭಾನುವಾರ ಮದ್ಯ ಮಾರಾಟ ಹಾಗೂ ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಆತ್ಮ ನಿರ್ಭರ್ ಯೋಜನೆ: ಕಿರುಸಾಲಕ್ಕೆ ಅರ್ಜಿ

ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯಡಿ ವಿಶೇಷ ಕಿರು ಸಾಲಕ್ಕಾಗಿ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 20 ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಭಾಲ್ಕಿ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಪುರಸಭೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು