ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಜಿಲ್ಲೆಯಲ್ಲಿ ಮೀನುಗಾರಿಕೆಗೆ ಪೂರಕ ವಾತಾವರಣ

Last Updated 12 ನವೆಂಬರ್ 2021, 16:00 IST
ಅಕ್ಷರ ಗಾತ್ರ

ಜನವಾಡ: ಜಿಲ್ಲೆಯಲ್ಲಿ ಒಳನಾಡು ಮೀನುಗಾರಿಕೆಗೆ ಪೂರಕ ವಾತಾವರಣ ಇದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಡಾ. ಮಲ್ಲೇಶ ಬಿ. ಹೇಳಿದರು.

ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ನಡೆದ ಸಮಗ್ರ ಮೀನು ಕೃಷಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೀನುಗಾರಿಕೆ ಕೈಗೊಳ್ಳುವ ರೈತರಿಗೆ ಪ್ರತಿ ಹೆಕ್ಟೇರ್‍ಗೆ ₹ 2.5 ಲಕ್ಷ ಸಹಾಯ ಧನದಲ್ಲಿ ಹೊಂಡ, ಬಲೆ, ಹರಿಗೋಲು, ಮೀನು ಮಾರಾಟಕ್ಕೆ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಮೊದಲಾದ ಸೌಲಭ್ಯಗಳು ಇವೆ ಎಂದು ಹೇಳಿದರು.

ಮೀನು ಕೃಷಿ ಕಡಿಮೆ ಖರ್ಚಿನಲ್ಲಿ ಅಧಿಕ ಲಾಭ ಗಳಿಸಬಹುದಾದ ಉಪ ಕಸುಬು ಆಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಎನ್.ಎಂ. ಸುನೀಲಕುಮಾರ ತಿಳಿಸಿದರು.

ವಿಜ್ಞಾನಿ ಡಾ. ಅಕ್ಷಯಕುಮಾರ ಮಾತನಾಡಿದರು. ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಪ್ರದೀಪ್ ಎಲ್.ಡಿ., ಬೀದರ್ ಪಶು ವೈದ್ಯಕೀಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕಿರಣ ಎಂ, ಡಾ. ಗೌತಮ, ಡಾ. ಜಾನ್ವಿ, ಡಾ. ಗಣೇಶ ಮಾತನಾಡಿದರು. ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ನಿರೂಪಿಸಿದರು. ಡಾ. ಆರ್.ಎಲ್. ಜಾಧವ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT