ಶುಕ್ರವಾರ, ಮೇ 14, 2021
25 °C

ಕ್ಷೇತ್ರದ ಅಭಿವೃದ್ಧಿಗಾಗಿ ಬೆಂಬಲಿಸಿ: ಸಚಿವ ಶ್ರೀಮಂತ್ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಲಸೂರ: ‘ಸಮಾಜದ ಎಲ್ಲ ಧರ್ಮ- ಸಮುದಾಯಗಳೊಂದಿಗೆ ಬೆರೆತು ಕೆಲಸ ಮಾಡುವ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಜನಸ್ನೇಹಿಯಾಗಿವೆ. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಬೇಕು’ ಎಂದು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜವಳಿ ಸಚಿವ ಶ್ರೀಮಂತ್ ಪಾಟೀಲ ಹೇಳಿದರು.

ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಪಕ್ಷದ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿರುವ ಜನಹಿತ ಬಯಸುವ ಬಿಜೆಪಿಯ ಶರಣು ಸಲಗರ ಅವರಿಗೆ ಮತ ನೀಡಬೇಕು’ ಎಂದು ಮನವಿ ಮಾಡಿಕೊಂಡರು.

ಗಡಿಗೌಡಗಾಂವ ಹಾಗೂ ಬೇಲೂರ ಗ್ರಾಮಗಳ ವಿವಿಧ ಬಡಾವಣೆಗಳಲ್ಲಿ ಸಂಚರಿಸಿದ ಶರಣು ಸಲಗರ, ಹುಲಸೂರ ಹಾಗೂ ಬಸವಕಲ್ಯಾಣ ತಾಲ್ಲೂಕುಗಳನ್ನು ಅಭಿವೃದ್ಧಿಪಡಿಸಲು ಮತ ಹಾಕಲು ಕೋರಿದರು.

ವಿಧಾನಪರಿಷತ್ ಮಾಜಿ ಸದಸ್ಯ ಎಸ್.ವೀರಯ್ಯ, ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಚಲುವಾದಿ ನಾರಾಯಣ ಸ್ವಾಮಿ, ಬಿಜೆಪಿ ಮುಖಂಡ ಪದ್ಮಾಕರ್ ಪಾಟೀಲ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸಿದ್ರಾಮ ಕಾಮಣ್ಣ, ಅನಿಲ ಭೂಸಾರೆ, ಬಿಜೆಪಿ ಯುವ ಮುಖಂಡ ಸೂರ್ಯಕಾಂತ ಚಿಲ್ಲಾಬಟ್ಟೆ, ಲತಾ ಹಾರಕೂಡೆ, ಮಹೇಶ ಪಾಟೀಲ, ಭೀಮಣ್ಣ ಕೊಳ್ಳಿ, ಸಂಗಮೇಶ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು