ಸೋಮವಾರ, ಸೆಪ್ಟೆಂಬರ್ 26, 2022
20 °C

ಸುರಭಿ ಎನ್‍ಜಿಒ: ಕಾಲ್ನಡಿಗೆ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಸುರಭಿ ಎನ್‍ಜಿಒ ವತಿಯಿಂದ ನಗರದಲ್ಲಿ ಬುಧವಾರ ಕಾಲ್ನಡಿಗೆ ಜಾಥಾ ನಡೆಯಿತು.
ಬಸವೇಶ್ವರ ವೃತ್ತದಿಂದ ಆರಂಭಗೊಂಡ ಜಾಥಾ ಪ್ರಮುಖ ಬೀದಿಗಳ ಮೂಲಕ ಶಿವಾಜಿ ವೃತ್ತಕ್ಕೆ ತಲುಪಿ ಸಮಾರೋಪಗೊಂಡಿತು.
ವಿದ್ಯಾರ್ಥಿಗಳು ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದರು.
ಸುರಭಿ ಎನ್‍ಜಿಒ ಕಾರ್ಯದರ್ಶಿ ಅನುಪಮಾ ಏರೋಳಕರ್, ಪ್ರಯಾವಿ ಆಸ್ಪತ್ರೆ ಸಂಸ್ಥಾಪಕ ಡಾ. ಅಮರ ಏರೋಳಕರ್, ಬಿಡಿಎ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಕಾಶ ಟೊಣ್ಣೆ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು