ಬಸವಕಲ್ಯಾಣ (ಬೀದರ್ ಜಿಲ್ಲೆ): ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ಅನುಭವ ಮಂಟಪದ ಪ್ರಸಕ್ತ ಸಾಲಿನ ‘ಡಾ.ಜಯದೇವಿತಾಯಿ ಲಿಗಾಡೆ ಪ್ರಶಸ್ತಿ’ಗೆ ಬೀದರ್ನ ಪ್ರವಚನಕಾರ್ತಿ ಸುವರ್ಣಾ ಚಿಮಕೋಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಸುವರ್ಣಾ ಬೀದರ್ನ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯದ ಸಂಚಾಲಕಿ ಆಗಿದ್ದಾರೆ. ಶ್ರಾವಣ ಮಾಸ ಹಾಗೂ ಇತರೆ ಸಂದರ್ಭದಲ್ಲಿ ಶರಣತತ್ವದ ಪ್ರವಚನ ಹೇಳುತ್ತಾರೆ. ಜೂನ್ 28ರಂದು ನಗರದಲ್ಲಿ ನಡೆಯುವ ಜಯದೇವಿತಾಯಿ ಲಿಗಾಡೆ ಜಯಂತಿ ಕಾರ್ಯಕ್ರಮದಲ್ಲಿ ಸುವರ್ಣಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿಶ್ವಸ್ಥ ಮಂಡಳಿ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.