ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನಸುಧಾಕ್ಕೆ ಸ್ವಚ್ಛ ವಿದ್ಯಾಲಯ ಪುರಸ್ಕಾರ

Last Updated 23 ಜೂನ್ 2022, 6:23 IST
ಅಕ್ಷರ ಗಾತ್ರ

ಬೀದರ್: ನಗರದ ಜ್ಞಾನಸುಧಾ ವಿದ್ಯಾಲಯವು ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನೀಡಲಾಗುವ 2021-22ನೇ ಸಾಲಿನ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಭಾಜನವಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ ಬಾಬು ಅವರು ವಿದ್ಯಾಲಯದ ಉಪ ಪ್ರಾಚಾರ್ಯೆ ಕಲ್ಪನಾ ಮೋದಿ ಪುರಸ್ಕಾರದ ಪ್ರಮಾಣ ಪತ್ರ ಪ್ರದಾನ ಮಾಡಿದರು.


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ವಿದ್ಯಾಲಯಕ್ಕೆ ಶೇ 95 ಅಂಕ ಹಾಗೂ ಐದು ಸ್ಟಾರ್‌ಗಳೊಂದಿಗೆ ಸ್ವಚ್ಛ ವಿದ್ಯಾಲಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಈ ಮೂಲಕ ವಿದ್ಯಾಲಯದ ಶೈಕ್ಷಣಿಕ ಸೇವೆಗೆ ಮತ್ತಷ್ಟು ಪ್ರೋತ್ಸಾಹ ನೀಡಿದೆ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ, ನಿರ್ದೇಶಕ ಮುನೇಶ್ವರ ಲಾಖಾ ತಿಳಿಸಿದ್ದಾರೆ.

ಜ್ಞಾನಸುಧಾ ವಿದ್ಯಾಲಯವು ಸುಸಜ್ಜಿತ ಕಟ್ಟಡ, ವಸತಿ ನಿಲಯ ಕಟ್ಟಡ, ವಿಶಾಲವಾದ ಮೈದಾನ, ಬ್ಯಾಸ್ಕೆಟ್ ಬಾಲ್, ವಾಲಿಬಾಲ್, ಕ್ರಿಕೆಟ್ ಮೈದಾನ, ಸ್ಕಿಟಿಂಗ್, ಸ್ವಿಮ್ಮಿಂಗ್, ಜಿಮ್, ಕ್ಯಾಂಟೀನ್, ಬಾಲಕ, ಬಾಲಕಿಯರ ಪ್ರತ್ಯೇಕ ಶೌಚಾಲಯ ಮೊದಲಾದ ಸೌಲಭ್ಯಗಳನ್ನು ಹೊಂದಿದೆ. ನಿರಂತರ ಸ್ವಚ್ಛತೆ ಕಾಪಾಡಿಕೊಂಡು ಬಂದಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT