ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸ್ವಾಮಿ ವಿವೇಕಾನಂದ ಆದರ್ಶ ಪಾಲಿಸಿ'

ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪದಲ್ಲಿ ಅನಿಲಕುಮಾರ ಪನ್ನಾಳೆ ಕಿವಿಮಾತು
Last Updated 19 ಜನವರಿ 2022, 14:50 IST
ಅಕ್ಷರ ಗಾತ್ರ

ಬೀದರ್: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶ ತತ್ವಗಳನ್ನು ಪಾಲಿಸಬೇಕು ಎಂದು ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸದಸ್ಯ ಅನಿಲಕುಮಾರ ಪನ್ನಾಳೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ತಮ್ಮ ಉನ್ನತ ವಿಚಾರಗಳಿಂದಾಗಿ ವಿಶ್ವದ ಗೌರವಕ್ಕೆ ಪಾತ್ರರಾಗಿದ್ದರು ಎಂದು ಬಣ್ಣಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಯುವ ಮುಖಂಡ ಗುರುನಾಥ ರಾಜಗೀರಾ ಮಾತನಾಡಿ, ಸ್ವಾಮಿ ವಿವೇಕಾನಂದರು 39 ವರ್ಷ ಮಾತ್ರ ಬದುಕಿದರೂ ಅವರ ಸಾಧನೆ ಅಗಾಧ ಎಂದು ನುಡಿದರು.

ಭಾರತವನ್ನು ತಿಳಿದುಕೊಳ್ಳಲು ಮೊದಲು ಸ್ವಾಮಿ ವಿವೇಕಾನಂದರನ್ನು ಅರಿಯಬೇಕು. ಯುವಕರು ದೇಶದ ಆಶಾಕಿರಣವಾಗಿ ಹೊರ ಹೊಮ್ಮಬೇಕು ಎಂದು ಸಲಹೆ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ವಿನಾಯಕ ಕೊತಮಿರ ಮಾತನಾಡಿ, ಯುವಶಕ್ತಿಯೇ ದೇಶದ ಅತಿದೊಡ್ಡ ಸಂಪತ್ತಾಗಿದೆ ಎಂದು ಹೇಳಿದರು.

ಯುವಕರು ನೈತಿಕತೆ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ತಂದೆ-ತಾಯಿಯ ಸೇವೆ ಮಾಡಬೇಕು. ದುಶ್ಚಟ, ದುರ್ಗುಣಗಳಿಂದ ದೂರ ಇರಬೇಕು ಎಂದು ತಿಳಿಸಿದರು.
ಬಿ.ಎ. ದ್ವಿತೀಯ ವರ್ಷದ ವಿದ್ಯಾರ್ಥಿ ಬಸವರಾಜ ಧರ್ಮಾಪೂರ ಅವರು ಸ್ವಾಮಿ ವಿವೇಕಾನಂದರ ಕುರಿತು ಮಾತನಾಡಿದರು.

ಭಾಷಣ, ಪ್ರಬಂಧ, ಜಾನಪದ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಡಾ. ಶ್ರೀಕಾಂತ ಮೋಹನರಾವ್ ಹಾಗೂ ಡಾ. ಸಂದೀಪ್ ತಿವಾರಿ ಸ್ಪರ್ಧೆಗಳ ನಿರ್ಣಾಯಕರಾಗಿದ್ದರು. ಎನ್.ಎಸ್.ಎಸ್ ಅಧಿಕಾರಿ ಡಾ. ಹೇಮಾವತಿ ಪಾಟೀಲ, ದೈಹಿಕ ಶಿಕ್ಷಣ ನಿರ್ದೇಶಕಿ ಊರ್ವಶಿ ಕೋಡ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಸಂಜೀವಕುಮಾರ ತಾಂದಳೆ ಸ್ವಾಗತಿಸಿದರು. ಸಾಂಸ್ಕೃತಿಕ ಸಂಯೋಜಕ ಪ್ರೊ. ಮಹೇಶಕುಮಾರ ಆರ್. ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT