ಶನಿವಾರ, ಜನವರಿ 22, 2022
16 °C

ಕತ್ತಿ ವರಸೆ ಕ್ರೀಡಾಕೂಟ: ಗುರುನಾನಕ ಶಾಲೆ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಅಖಿಲ ಭಾರತ ಕತ್ತಿ ವರಸೆ ಕ್ರೀಡಾಕೂಟದಲ್ಲಿ ಇಲ್ಲಿಯ ನೆಹರೂ ಕ್ರೀಡಾಂಗಣ ಸಮೀಪದ ಗುರುನಾನಕ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಚಿನ್ನದ ಪದಕದ ಸಾಧನೆಗೈದಿದ್ದಾರೆ.

ನಾಲ್ಕನೇ ತರಗತಿಯ ಸಂಸ್ಕೃತಿ ಶ್ರೀಕಾಂತ ಮೋದಿ ಹಾಗೂ ಏಳನೇ ತರಗತಿಯ ಯೋಗೇಶ್ವರಿ ರಾಜಶೇಖರ ಚಿನ್ನದ ಪದಕ ಜಯಿಸಿದ್ದಾರೆ.

ಸಾಧಕ ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರಾಚಾರ್ಯ ಎನ್. ರಾಜು ಸನ್ಮಾನಿಸಿದರು.

ಪ್ರತಿ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅಗತ್ಯ ಎಂದು ಅವರು ಹೇಳಿದರು.

ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು