ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

Last Updated 8 ಸೆಪ್ಟೆಂಬರ್ 2021, 13:13 IST
ಅಕ್ಷರ ಗಾತ್ರ

ಜನವಾಡ: ಶೈಕ್ಷಣಿಕ ಅನುಕೂಲಕ್ಕಾಗಿ ಅಗಸ್ತ್ಯ ಫೌಂಡೇಷನ್ ಹಾಗೂ ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರದ ವತಿಯಿಂದ ಬೀದರ್ ತಾಲ್ಲೂಕಿನ ಸಂಗೋಳಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ಅವರು, ವಿದ್ಯಾರ್ಥಿಗಳು ಟ್ಯಾಬ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರದ ಮುಖ್ಯಸ್ಥ ಬಾಬುರಾವ್ ಎನ್.ಎಸ್ ಮಾತನಾಡಿದರು. ಡಯಟ್ ಉಪನ್ಯಾಸಕ ಝಾಕೀರ್ ಹುಸೇನ್, ಮುಖ್ಯ ಶಿಕ್ಷಕ ಭೀಮಣ್ಣ ಹಡಪದ, ವೀರಾಜ್ ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕ ಸುಧಾಕರ ನಿರೂಪಿಸಿದರು. ಶಿಕ್ಷಕ ಕಿಶೋರ ವಂದಿಸಿದರು.

ಇದೇ ವೇಳೆ ಶಾಲೆಯಲ್ಲಿ ಗಣಕಯಂತ್ರ ಕೋಣೆ ಉದ್ಘಾಟನೆಯೂ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT