ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ಕ್ರಮ ವಹಿಸಿ

ಜಿಲ್ಲಾಧಿಕಾರಿ ರಾಮಚಂದ್ರನ್ ಸೂಚನೆ
Last Updated 16 ಡಿಸೆಂಬರ್ 2020, 16:14 IST
ಅಕ್ಷರ ಗಾತ್ರ

ಬೀದರ್‌: ‘ಜಿಲ್ಲೆಯಲ್ಲಿ ಸೀಗರೇಟ ಹಾಗೂ ಇನ್ನಿತರ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ತಂಬಾಕು ದಾಳಿಯ ಸಂಬಂಧ ಟಿಎಲ್‌ಸಿಸಿ ಸಭೆ ನಡೆಸಬೇಕು. ಪ್ರತಿ ತಾಲ್ಲೂಕಿನಲ್ಲಿ ವಾರದಲ್ಲಿ ಒಂದು ದಾಳಿಯಾದರೂ ನಡೆಸಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಒತ್ತು ಕೊಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ ಮಾತನಾಡಿ, ‘ಕೋಟ್ಪಾ ಕಾಯ್ದೆ 2003ರ ನಿಯಮಗಳನ್ನು ಪಾಲಿಸದ ಮತ್ತು ಉಲ್ಲಂಘನೆ ಮಾಡಿದ ಅಂಗಡಿಗಳ ಮೇಲೆ ಒಟ್ಟು 198 ದಾಳಿ ನಡೆಸಿ ಇಲ್ಲಿಯ ವರೆಗೆ ಒಟ್ಟು ₹21,650 ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಈಗಾಗಲೇ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕಾಗಿ, ತಂಬಾಕು ಮುಕ್ತ ಶಾಲೆಗಳು ಎನ್ನುವ ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಡಾ.ಕೃಷ್ಣಾ ರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಶಂಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT