ಸರ್ಕಾರದ ಯೋಜನೆಗಳ ಲಾಭ ಪಡೆಯಿರಿ

ಬೀದರ್: ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಸರ್ಕಾರದ ಯೋಜನೆಗಳ ಲಾಭ ಪಡೆದು ಆರ್ಥಿಕವಾಗಿ ಸದೃಢರಾಗಲು ಪ್ರಯತ್ನಿಸಬೇಕು ಎಂದು ಡಾನ್ ಬೋಸ್ಕೊ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕ ಜೇಮ್ಸ್ ಪೌಲ್ ಸಲಹೆ ನೀಡಿದರು.
ಚಿಕ್ಕಪೇಟೆಯ ಡಾನ್ ಬೋಸ್ಕೊ ಸಮಾಜ ಸೇವಾ ಸಂಸ್ಥೆಯಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಆಯೋಜಿಸಿದ್ದ ನಾಯಕತ್ವ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.
ಡಿಸಿಸಿ ಬ್ಯಾಂಕ್ ಅಧಿಕಾರಿ ಉಮಾದೇವಿ ಮಾತನಾಡಿ, ಸ್ವಸಹಾಯ ಸಂಘಗಳ ಮಹಿಳೆಯರಿಗೆ ಡಿಸಿಸಿ ಬ್ಯಾಂಕ್ ಕೇವಲ 20ಪೈಸೆ ಬಡ್ಡಿ ದರದಲ್ಲಿ ₹ 5ರಿಂದ ₹ 10 ಲಕ್ಷವರೆಗೆ ಸಾಲ ಸೌಲಭ್ಯ ಒದಗಿಸುತ್ತಿದೆ. ಇದರ ಲಾಭ ಪಡೆಯಬೇಕು ಎಂದರು.
ಡಿಸಿಸಿ ಬ್ಯಾಂಕ್ ಅಧಿಕಾರಿ ಅರ್ಚನಾ, ಡಾ.ಜೈಶಾಲಿನಿ, ಆರ್ಬಿಟ್ ಸಂಸ್ಥೆಯ ನಿರ್ಮಲಾ ಇದ್ದರು. ಸವಿತಾ ಸೂರ್ಯವಂಶಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಂದಿನಿ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.