ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಯೋಜನೆಗಳ ಲಾಭ ಪಡೆಯಿರಿ- ಭಗವಂತ ಖೂಬಾ

Last Updated 27 ಮಾರ್ಚ್ 2023, 15:18 IST
ಅಕ್ಷರ ಗಾತ್ರ

ಬೀದರ್: ಮಹಿಳೆಯರು ಕೇಂದ್ರದ ಯೋಜನೆಗಳ ಲಾಭ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ನಗದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಆಡಳಿತ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ದೀನ್ ದಯಾಳ್ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳಿಗೆ ದಶ ಸೂತ್ರ, ಪ್ರದೇಶ ಒಕ್ಕೂಟಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಾಗೂ ಬೀದಿ ಬದಿ ವ್ಯಾಪಾರಿಗಳೊಂದಿಗೆ ಸಂವಾದ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ದೇಶದ ಆರ್ಥಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲು ಶೇ 20-25 ರಷ್ಟಿದ್ದು, ಶೇ 70ಕ್ಕೆ ತಲುಪಬೇಕಿದೆ ಎಂದು ಹೇಳಿದರು.

ದೇಶದಲ್ಲಿ ಜನ್ ಧನ್ ಯೋಜನೆಯಡಿ 43 ಕೋಟಿ ಖಾತೆ ತೆರೆಯಲಾಗಿದೆ. ಈ ಪೈಕಿ 32 ಕೋಟಿ ಮಹಿಳೆಯರು ಖಾತೆ ತೆರೆದಿದ್ದಾರೆ. ಮುದ್ರಾ ಯೋಜನೆಯಲ್ಲೂ ಮಹಿಳೆಯರು ಹೆಚ್ಚಿನ ಲಾಭ ಪಡೆದಿದ್ದಾರೆ ಎಂದರು.
ಪೌರಾಯುಕ್ತ ಶಿವರಾಜ ರಾಠೋಡ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮೋತಿಲಾಲ್ ಲಮಾಣಿ, ಚಂದ್ರಶೇಖರ ದೇಶಮುಖ, ಅಣ್ಣೆಪ್ಪ ಖಾನಾಪುರೆ, ಪ್ರಕಾಶ, ನಾಗೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT