ಬೀದರ್: ಹುಮನಾಬಾದ್ ತಾಲ್ಲೂಕು ಆರೋಗ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಹುಮನಾಬಾದ್ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.

ಸಂಘದ ಪದಾಧಿಕಾರಿಗಳು ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಮನವಿಪತ್ರ ಸಲ್ಲಿಸಿದರು.

ಜಿಲ್ಲೆಯ ಜನರನ್ನು ಕೊರೊನಾ ಸೋಂಕಿನಿಂದ ರಕ್ಷಿಸಲು ರಾಜ್ಯ ಸರ್ಕಾರಿ ನೌಕರರು ಹಗಲಿರುಳು ಎನ್ನದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಕೆಲವರು ಕೊರೊನಾ ವಾರಿಯರ್ಸ್‍ಗಳ ಆತ್ಮಸ್ಥೈರ್ಯ ಕುಗ್ಗಿಸುವ, ಅವರ ಮೇಲೆ ಹಲ್ಲೆ ನಡೆಸುವ ಹಾಗೂ ಅವರಿಗೆ ಜೀವ ಬೆದರಿಕೆ ಒಡ್ಡುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ದೂರಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಿಂದ ಜೀವ ಬೆದರಿಕೆ ಇರುವ ಕಾರಣ ಹುಮನಾಬಾದ್ ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಕೊರೊನಾ ವಾರಿಯರ್ಸ್ ಆಗಿರುವ ಸರ್ಕಾರಿ ನೌಕರರ ಮೇಲೆ ಹಲ್ಲೆ, ಬೆದರಿಕೆ ಒಡ್ಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ನೌಕರರ ಮೇಲಿನ ದೌರ್ಜನ್ಯ ಪ್ರಕರಣಗಳು ಮುಂದುವರಿದಲ್ಲಿ ಸಂಘದಿಂದ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ನಿರ್ದೇಶಕ ನೀಲಕಂಠ ಬಿರಾದಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.