ಮಂಗಳವಾರ, ಫೆಬ್ರವರಿ 25, 2020
19 °C

ವಿದ್ಯಾರ್ಥಿನಿಗೆ ಕಿರುಕುಳ: ಶಿಕ್ಷಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಮಲನಗರ (ಬೀದರ್ ಜಿಲ್ಲೆ): ವಿದ್ಯಾರ್ಥಿನಿಯೊಬ್ಬಳಿಗೆ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಠಾಣಾಕುಶನೂರ ಸರ್ಕಾರಿ ಪಬ್ಲಿಕ್ ಶಾಲೆ ಶಿಕ್ಷಕ ವೀರಕುಮಾರ (48) ಎಂಬಾತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಶಿಕ್ಷಕ ವಾಟ್ಸ್‌ ಆ್ಯಪ್ ಮೂಲಕ ವಿದ್ಯಾರ್ಥಿನಿಗೆ ಅಶ್ಲೀಲ ಪದಗಳಿಂದ ಚಾಟಿಂಗ್ ಮಾಡಿದ್ದಾನೆ.

ಈ ಕುರಿತು ಪಾಲಕರು ನೀಡಿದ ದೂರಿನ ಮೇರೆಗೆ ಶಿಕ್ಷಕ ವೀರಕುಮಾರನನ್ನು ಅಮಾನತು ಮಾಡಲಾಗಿದೆ. ಠಾಣಾಕುಶನೂರ ಪೊಲೀಸರು ದೂರು ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ. ಮಂಜುನಾಥ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು