ಹುಮನಾಬಾದ್ (ಬೀದರ್ ಜಿಲ್ಲೆ): ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಸಂಬಂಧ ತಾಲ್ಲೂಕಿನ ಅನುದಾನ ಸಹಿತ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
.ಸತತ ಮಳೆಗೆ ಕುಸಿದು ಬಿದ್ದ ಬೀದರ್ ಕೋಟೆ ಗೋಡೆ.
ಅನೇಕ ಸಲ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ, ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆಯೊಡ್ಡಿದ್ದಾನೆ. ಇದರಿಂದ ಹೆದರಿದ ಬಾಲಕಿ ಶಾಲೆಗೆ ಹೋಗಲು ನಿರಾಕರಿಸಿದ್ದಾಳೆ. ಪೋಷಕರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯಶಿಕ್ಷಕರಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಂತಿಮವಾಗಿ ಬಾಲಕಿಯ ತಂದೆ ನೀಡಿದ ದೂರಿನ ಅನ್ವಯ ಹುಮನಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿದ್ದಾರೆ.
.ಬೀದರ್ | ಮುಂದುವರಿದ ಮಳೆ; ಡೆಮು ರೈಲು ಸಂಚಾರ ರದ್ದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.