ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕನಿಂದ ಸುಂದರ ಸಮಾಜ ಸಾಧ್ಯ

ನೆಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
Last Updated 23 ಜೂನ್ 2022, 4:09 IST
ಅಕ್ಷರ ಗಾತ್ರ

ಖಟಕಚಿಂಚೋಳಿ: ಸಮೀಪದ ನೆಲವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಂಕರ ಜಗದಾಳೆ ಅವರ ಪದೋನ್ನತಿ ಪ್ರಯುಕ್ತ ಮಂಗಳವಾರ ಗುರುವಂದನಾ ಕಾರ್ಯಕ್ರಮ ನಡೆಯಿತು.

ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ರಾಜಕುಮಾರ ಜೋಳದಾಪಕೆ ಮಾತನಾಡಿ,‘ಶಂಕರ ಜಗದಾಳೆ ಅವರು ಸಮಯದ ಪರಿಪಾಲಕರಾಗಿದ್ದರು’ ಎಂದು ತಿಳಿಸಿದರು.ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ಧ ಜಾಡರ್, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ರಂಗರಾವ್ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಅರುಣ ಹಜ್ಜರಗೆ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಸದಸ್ಯ ರಾಜಕುಮಾರ ತೊಗರೆ, ಅಮೂಲ್ ಪಾಟೀಲ, ಸಿಆರ್‌ಪಿ ಶಿರೋಮಣಿ ಇದ್ದರು. ಪದೋನ್ನತಿ ಹೊಂದಿದ ಶಿಕ್ಷಕ ಶಂಕರ ಜಗದಾಳೆ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ರಾಜಕುಮಾರ ಜೋಳದಾಪಕೆ, ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ಧ ಜಾಡರ್ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಮುಖ್ಯ ಶಿಕ್ಷಕ ಧೂಳಪ್ಪ ಹೂಗಾರ ಸ್ವಾಗತಿಸಿದರು. ವಿಜಯಕುಮಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT