ಮಂಗಳವಾರ, ಮೇ 11, 2021
20 °C

‘ಶಿಕ್ಷಕಿಯರಿಗೆ ವಿಶೇಷ ರಜೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್‌: ಕಲ್ಯಾಣ ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯರನ್ನು ಸ್ವಂತ ಜಿಲ್ಲೆಗೆ ವರ್ಗಾಯಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕಿಯರ ಸಂಘದ ಪದಾಧಿಕಾರಿಗಳು ಶಾಸಕ ರಾಜಶೇಖರ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಮಾರಣಾಂತಿಕ ಕಾಯಿಲೆ ಇರುವ ಶಿಕ್ಷಕಿಯರಿಗೆ ವಿಶೇಷ ರಜೆ ಮಂಜೂರು ಮಾಡಬೇಕು. 45 ವರ್ಷ ಮೇಲ್ಪಟ್ಟ ಶಿಕ್ಷಕಿಯರನ್ನು ಬೋಧನಾ ಕಾರ್ಯ ಬಿಟ್ಟು ಬೇರೆ ಕೆಲಸಗಳಿಗೆ ನೇಮಿಸಬಾರದು. ರಜಾ ಅವಧಿಯಲ್ಲಿ ಬಿ.ಎಲ್.ಒ ಆಗಿ ಕಾರ್ಯನಿರ್ವಹಿಸಿರುವ ಶಿಕ್ಷಕಿಯರಿಗೆ ಗಳಿಕೆ ರಜೆ ಸೌಲಭ್ಯ ನೀಡಬೇಕು. ಇತರೆ ಬೇಡಿಕೆಗಳನ್ನು ಸಹ ಈಡೇರಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸಾರಿಕಾ ಗಂಗಾ, ಪ್ರಧಾನ ಕಾರ್ಯದರ್ಶಿ ಭುವನೇಶ್ವರಿ, ಕೋಶಾಧ್ಯಕ್ಷೆ ಶರಣಮ್ಮ, ತಾಲ್ಲೂಕು ಘಟಕದ ಅಧ್ಯಕ್ಷೆ ಸುನಿತಾ ಪಾಟೀಲ, ಚಿಟಗುಪ್ಪ ತಾಲ್ಲೂಕು ಘಟಕದ ಅಧ್ಯಕ್ಷೆ ಪ್ರಮಿಳಾ, ಪದಾಧಿಕಾರಿಗಳಾದ ಕಲಾವತಿ ಮುರ್ತುಳ್ಳಿ, ಶರಣಮ್ಮ ಸಜ್ಜನಶೆಟ್ಟಿ, ಸವಿತಾ, ಅಂಬಿಕಾ, ಸುಮಂಗಲಾ ಹಾಗೂ ಜ್ಯೋತಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.