ಭಾಲ್ಕಿ (ಬೀದರ್ ಜಿಲ್ಲೆ): ತಾಲ್ಲೂಕಿನ ಹುಪಳಾ-ಅಹಮದಾಬಾದ್ ಗ್ರಾಮ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಶಿವಾನಂದ ತುಳಸಿರಾಮ ಮೇತ್ರೆ (38) ಸೋಮವಾರ ರಾತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
.ಭಾಲ್ಕಿ: 29 ಮಕ್ಕಳು ಶಾಲೆಯಿಂದ ಹೊರಗೆ; ವರದಿಗೆ ಸೂಚನೆ.
ಮೃತ ಶಿವಾನಂದ ಅವರು ತಮ್ಮ ಹೊಲದಿಂದ ಬೀದರ್ ಉದಗೀರ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಮಾರ್ಗವಾಗಿ ದ್ವಿಚಕ್ರ ವಾಹನದ ಮೇಲೆ ತಮ್ಮ ಗ್ರಾಮ ಹುಪಳಾ ಕಡೆಗೆ ಬರುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವು ಸಂಭವಿಸಿದೆ.

ಈ ಸಂಬಂಧ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ವಿಶ್ವರಾಧ್ಯ ತಿಳಿಸಿದ್ದಾರೆ.
.ಭಾಲ್ಕಿ: ಮಲ್ಲಣ್ಣ ದೇವರ ಅದ್ದೂರಿ ಜಾತ್ರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.