ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಖೂಬಾಗೆ ಕರೆ: ಶಿಕ್ಷಕ ಅಮಾನತು

Last Updated 23 ಜೂನ್ 2022, 4:11 IST
ಅಕ್ಷರ ಗಾತ್ರ

ಔರಾದ್ (ಬೀದರ್ ): ‘ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ವಾದ ನಡೆಸಿದ ಆರೋಪದ ಮೇಲೆ ತಾಲ್ಲೂಕಿನ ಜೀರ್ಗಾ (ಕೆ) ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಕುಶಾಲ ಪಾಟೀಲ ಅವ ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿ ಕಾರಿ ಎಚ್.ಎಸ್.ನಗನೂರ ತಿಳಿಸಿದ್ದಾರೆ.

‘ಸಚಿವರ ಜೊತೆ ಅನುಚಿತವಾಗಿ ವರ್ತಿಸಿದ್ದು ಅಲ್ಲದೇ, ಅವರೊಂದಿಗಿನ ಸಂಭಾಷಣೆಯನ್ನು ರೆಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಾರಣ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

ಹೆಡಗಾಪುರ ಗ್ರಾಮದ ಕುಶಾಲ ಪಾಟೀಲ, ಭಗವಂತ ಖೂಬಾ ಅವರಿಗೆ ಕರೆ ಮಾಡಿ, ‘ಊರಿನಲ್ಲಿ ಗೊಬ್ಬರ ಸಿಗುತ್ತಿಲ್ಲ. ರೈತರು ತೊಂದರೆಯಲ್ಲಿದ್ದಾರೆ. ಇದರಿಂದ ನಿಮ್ಮ ಹೆಸರು ಕೆಡುತ್ತಿದೆ. ಹೀಗಾದರೆ ಮುಂದಿನ ಚುನಾವಣೆಯಲ್ಲಿ ನಿಮಗೆ ಸಮಸ್ಯೆಯಾಗಲಿದೆ’ ಎಂದು ಹೇಳಿದ್ದರು. ಇದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯಿಸಿ, ‘ನಾನು ಕೇಂದ್ರ ಸಚಿವ, ಮನೆ ಮನೆಗೆ ಗೊಬ್ಬರ ಪೂರೈಸಲು ಆಗುವುದೇ’ ಎಂದು ಪ್ರಶ್ನಿಸಿದ್ದರು.

ನಂತರ ರೈತ ಸಂಘಟನೆಗಳ ಪದಾಧಿಕಾರಿಗಳು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT