ಶನಿವಾರ, ಅಕ್ಟೋಬರ್ 8, 2022
23 °C

ಶಿಕ್ಷಕರಿಗೆ ಪಂಚಾಯಿತಿ ಸದಸ್ಯರ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ನರಸಪ್ಪ ಯಾಕತಪುರ ಅವರು ಶಿಕ್ಷಕರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಶಾಲೆಯ ಶಿಕ್ಷಕರು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುತ್ತಿದ್ದಾರೆ. ಹೀಗಾಗಿ ಅವರನ್ನು ಸನ್ಮಾನಿಸಿ, ಪ್ರೋತ್ಸಾಹಿಸಲಾಗಿದೆ ಎಂದು ಹೇಳಿದರು.

ವಸತಿ ಶಾಲೆಗಳ ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ, ಪ್ರಾಚಾರ್ಯ ತುಕಾರಾಮ ಯಾತಪ್ಪ, ವಾರ್ಡನ್ ಮಹಾಂತಪ್ಪ ದೊಡ್ಡಮನಿ, ಪ್ರಮುಖರಾದ ಚಂದ್ರಶೇಖರ ಮಡಕಿ, ರಾಜಕುಮಾರ ಮಡಕಿ, ಸಂಜುಕುಮಾರ ಯಾಕತಪುರ, ಕುಪೇಂದ್ರ ಯಾಕತಪುರ ಮೊದಲಾದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು