ಶುಕ್ರವಾರ, ಸೆಪ್ಟೆಂಬರ್ 30, 2022
26 °C
ಜನಸೇವಾ ಶಾಲೆಯಲ್ಲಿ ಶಿಕ್ಷಕರ ದಿನ ಅರ್ಥಪೂರ್ಣ ಆಚರಣೆ

ಬೀದರ್: ವಿದ್ಯಾರ್ಥಿಗಳಿಂದ ಶಿಕ್ಷಕರ ಪಾದಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಪ್ರತಾಪನಗರದ ಜನಸೇವಾ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರ ಪಾದಪೂಜೆ, ಸನ್ಮಾನ, ಸಿಹಿ ವಿತರಣೆ ಮೂಲಕ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿದ್ಯಾರ್ಥಿಗಳು ಪಾದಪೂಜೆ ಮಾಡಿ, ಶಾಲು ಹೊದಿಸಿ ಶಿಕ್ಷಕರನ್ನು ಗೌರವಿಸಿದರು. ಸಿಹಿ ತಿನ್ನಿಸಿ ಶಿಕ್ಷಕರ ದಿನದ ಶುಭಾಶಯ ಕೋರಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ತಜ್ಞರಾಗಿದ್ದರು. ಭಾರತದ ತತ್ವಶಾಸ್ತ್ರ ವಿಶ್ವದ ಅನೇಕ ದೇಶಗಳಿಗೆ ಪರಿಚಯಿಸಿದ್ದರು. ನೇರ ನಡೆ ನುಡಿಗೆ ಹೆಸರಾಗಿದ್ದ ಅವರು, ಶಿಕ್ಷಕರಿಗೆ ಅಪಾರ ಗೌರವ ಕೊಡುತ್ತಿದ್ದರು. ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸಿಕೊಂಡರು ಎಂದು ವಿಶೇಷ ಉಪನ್ಯಾಸ ನೀಡಿದ ನೌಬಾದ್‍ನ ಸರ್ಕಾರಿ ಪ್ರಥಮ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಶಿವಕುಮಾರ ಉಪ್ಪೆ ಹೇಳಿದರು.

ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಮಕ್ಕಳಿಗೆ ಉತ್ತಮ ಸಂಸ್ಕಾರ, ಭ್ರಾತೃತ್ವ, ಸೌಹಾರ್ದದ ವಾತಾವರಣ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಬಹು ದೊಡ್ಡದಾಗಿದೆ. ಶಿಕ್ಷಕರು ಮನಸ್ಸು ಮಾಡಿದರೆ ದೇಶದ ಚಿತ್ರಣವನ್ನೇ ಬದಲಿಸಬಹುದು ಎಂದು ನುಡಿದರು.

ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಮಾತನಾಡಿದರು. ಶಿಕ್ಷಕರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.

ಜನಸೇವಾ ಪ್ರತಿಷ್ಠಾನದ ಸದಸ್ಯ ಬಿ.ಎಸ್. ಕುದರೆ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ಸ್ವಾಮಿ, ಖಜಾಂಚಿ ಶಿವರಾಜ ಹುಡೇದ್, ಸದಸ್ಯ ಶಿವಲಿಂಗಪ್ಪ ಜಲಾದೆ, ಆಡಳಿತಾಧಿಕಾರಿ ಸೌಭಾಗ್ಯವತಿ, ಮುಖ್ಯಶಿಕ್ಷಕ ಶಿವಾನಂದ ಮಲ್ಲ ಇದ್ದರು.

ವಿದ್ಯಾರ್ಥಿಗಳಾದ ಅಮೂಲ್ಯ ಹಾಗೂ ಆರತಿ ನಿರೂಪಿಸಿದರು. ಕಾವ್ಯ ವಂದಿಸಿದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು