ಶನಿವಾರ, ಏಪ್ರಿಲ್ 4, 2020
19 °C
ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ್ ಸಲಹೆ

ಕೋವಿಡ್‌: ಜನ ಜಾಗೃತಿ ಮೂಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಆರೋಗ್ಯ ಅಧಿಕಾರಿಗಳ ಸಹಯೋಗದೊಂದಿಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಯ ಮುಖ್ಯಸ್ಥರು, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಕೋವಿಡ್‌ 19 ಕುರಿತು ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕೋವಿಡ್ 19 ಸೋಂಕು ತಡೆ ಮುಂಜಾಗೃತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೋವಿಡ್‌ ಸೋಂಕಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಂದ ವಿಚಲಿತರಾಗಬಾರದು. ಆರೋಗ್ಯ ಇಲಾಖೆಯ ವೆಬ್‍ಸೈಟ್‍ನಲ್ಲಿ ಅಧಿಕೃತ ಮಾಹಿತಿ ಬಿತ್ತರಿಸಲಾಗುತ್ತದೆ. ಸೋಂಕು ಕುರಿತಂತೆ ಯಾವುದೇ ರೀತಿಯ ಮಾಹಿತಿ ಬೇಕಿದ್ದಲ್ಲಿ ಇಲಾಖೆಯ ವೆಬ್‍ಸೈಟ್‌ಗಳಲ್ಲಿ ವೀಕ್ಷಿಸಬಹುದು’ ಎಂದು ತಿಳಿಸಿದರು.

‘ಎನ್–95 ಮಾಸ್ಕ್‌ಗಳನ್ನು ಶಂಕಿತ ಸೋಂಕಿನ ಲಕ್ಷಣ ಹೊಂದಿರುವ ರೋಗಿ, ಅವರ ಸಂಬಂಧಿಕರು ಮತ್ತು ವೈದ್ಯರು ಮಾತ್ರ ಬಳಸಬೇಕು. ಒಂದು ವೇಳೆ ಮಾರುಕಟ್ಟೆಯಲ್ಲಿ ಲಭ್ಯವಿಲ್ಲದಿದ್ದರೆ ಬಿಳಿ ಬಣ್ಣದ ಬಟ್ಟೆ, ಕರವಸ್ತ್ರಗಳನ್ನು ಬಿಸಿ ನೀರಿನಲ್ಲಿ ಒಗೆದು ಒಣಗಿಸಿದ ಬಟ್ಟೆಗಳನ್ನು ಕಟ್ಟಿಕೊಳ್ಳಬಹುದು’ ಎಂದು ಹೇಳಿದರು.

ಬ್ರಿಮ್ಸ್ ವೈದ್ಯಾಧಿಕಾರಿ ಡಾ.ಮಹೇಶ ತೊಂಡಾರೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ, ಭಂವರ್‌ ಸಿಂಗ್ ಮೀನಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟೆಪ್ಪಗೋಳ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು