ನಿಯಮ ಉಲ್ಲಂಘಿಸಿ ಟೆಂಡರ್: ಕ್ರಮಕ್ಕೆ ಆಗ್ರಹ

7
ಸಚಿವ ಕಾಶೆಂಪುರಗೆ ಮನವಿ ಸಲ್ಲಿಕೆ

ನಿಯಮ ಉಲ್ಲಂಘಿಸಿ ಟೆಂಡರ್: ಕ್ರಮಕ್ಕೆ ಆಗ್ರಹ

Published:
Updated:
Deccan Herald

ಬೀದರ್: ಭಾಲ್ಕಿ ಹಾಗೂ ಹುಮನಾಬಾದ್ ಪುರಸಭೆಯಲ್ಲಿ ನಗರೋತ್ಥಾನ ಯೋಜನೆ ಕಾಮಗಾರಿಗಳ ಟೆಂಡರ್‌ನಲ್ಲಿ ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘ ಒತ್ತಾಯಿಸಿದೆ.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಹಾಸನಕರ್ ನೇತೃತ್ವದಲ್ಲಿ ಪದಾಧಿಕಾರಿಗಳು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

‘ಸರ್ಕಾರದ ಎಲ್ಲ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 24.10 ರಷ್ಟು ಅನುದಾನ ಮೀಸಲಿರಿಸಿ ಟೆಂಡರ್ ಕರೆಯಬೇಕು ಎನ್ನುವ ನಿಯಮ ಇದೆ. ಆದರೆ, ಭಾಲ್ಕಿ ಹಾಗೂ ಹುಮನಾಬಾದ್’ ಪುರಸಭೆಯಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ದೂರಿದರು.

ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

‘ಕೂಡಲೇ ಟೆಂಡರ್ ಪ್ರಕ್ರಿಯೆ ತಡೆ ಹಿಡಿಯಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಗುತ್ತಿಗೆಯಲ್ಲಿ ನಿಯಮಾನುಸಾರ ಅನುದಾನ ಮೀಸಲಿಟ್ಟ ನಂತರವೇ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನ್ಯಾಯ ದೊರಕದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು. ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ ಸಚಿವರು, ‘ಈ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬುದ್ಧಪ್ರಕಾಶ ಭಾವಿಕಟ್ಟಿ, ತಾಲ್ಲೂಕು ಘಟಕದ ಅಧ್ಯಕ್ಷ ಪ್ರಥ್ವಿರಾಜ ನಿಟ್ಟೂರಕರ್, ಸದಸ್ಯರಾದ ರಾಜಕುಮಾರ ವಾಘಮಾರೆ, ವಿಠ್ಠಲ ಪಾಂಡೆ, ಸಂಜುಕುಮಾರ ದೊಡ್ಡಮನಿ, ಪ್ರಶಾಂತ ಸಾಗರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !