ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ಶಕ್ತಿಶಾಲಿ ಮಾಡುವ ಪಣ ತೊಡಿ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Last Updated 16 ಆಗಸ್ಟ್ 2022, 16:27 IST
ಅಕ್ಷರ ಗಾತ್ರ

ಕಮಲನಗರ: ‘ಭಾರತವನ್ನು ಶಕ್ತಿಶಾಲಿ ದೇಶವನ್ನಾಗಿ ಮಾಡಲು ಸಂಕಲ್ಪ ಮಾಡೋಣ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕಾಶಿನಾಥ ಜಿರ್ಗೆ ಹೇಳಿದರು. ತಾಲ್ಲೂಕಿನ ಠಾಣಾಕುಶನೂರು ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ,‘ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡಬೇಕು’ ಎಂದರು.

ಠಾಣಾಕುಶನೂರು ಪಿಎಸ್‍ಐ ನಂದಿನಿ.ಎಸ್, ಬ್ರಹ್ಮಾನಂದ ಕೋರೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನೋಹರ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಧನರಾಜ ಕ್ಯಾದಪ್ಪಾ ಅಧ್ಯಕ್ಷತೆ ವಹಿಸಿದ್ದರು. ಠಾಣಾಕುಶನೂರು ವಿರಕ್ತ ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಜೀವಕುಮಾರ ಜುಮ್ಮಾ ನಿರೂಪಿಸಿದರು. ಶಿವಶರಣಪ್ಪ ವಲ್ಲೇಪುರೆ ವಂದಿಸಿದರು.

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯೋಧರು, ಸಮಾಜ ಸೇವಕರು, ಕೊರೊನಾ ವಾರಿಯರ್ಸ್‌, ಕಲೆ, ಸಾಹಿತ್ಯದಲ್ಲಿ ಸಾಧನೆ ಮಾಡಿದವರು, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಶೇ 100ರಷ್ಟು ಫಲಿತಾಂಶ ಪಡೆದ ಶಾಲೆಗಳು ಹಾಗೂ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT