ಬೀದರ್: ‘ಅಂಗನವಾಡಿ ನೇಮಕಾತಿಯಲ್ಲಿ ಹೆಚ್ಚಿನ ಪಾರದರ್ಶಕತೆ ಕೈಗೊಳ್ಳಬೇಕು. ಗರಿಷ್ಠ ಮೂರು ತಿಂಗಳೊಳಗೆ ಇಡೀ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ವಿಭಾಗೀಯ ಮಟ್ಟದ ಮೊದಲ ದಿನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯಾವುದೇ ಕಾರಣದಿಂದಲೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗಬಾರದು. ನೇಮಕಾತಿ ವೇಳೆ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣವೇ ಪರಿಹರಿಸಬೇಕು. ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ. ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೆ ಕಾಳಜಿಯಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಸ್ಥಳೀಯ ಸಚಿವರು ಹಾಗೂ ಶಾಸಕರಿಗೆ ಇಲಾಖೆಯ ಕಾರ್ಯಕ್ರಮ ಮತ್ತು ಪ್ರಗತಿಯ ವಿವರಗಳನ್ನು ಕಾಲಕಾಲಕ್ಕೆ ಕಡ್ಡಾಯವಾಗಿ ನೀಡಬೇಕು ಎಂದು ಸೂಚಿಸಿದರು.

ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ನಮ್ಮ ಸರ್ಕಾರದ ಬಹಳ ಕ್ರಿಯಾಶೀಲ ಸಚಿವರು. ಮಹಿಳೆಯರು, ಮಕ್ಕಳು, ವಿಕಲಚೇತರು ಹಾಗೂ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಜವಾಬ್ದಾರಿಯುತವಾಗಿ ಇಲಾಖೆ ನಿರ್ವಹಿಸುತ್ತಿದ್ದಾರೆ ಎಂದರು.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಒಳಗೊಂಡ ಕಲಬುರಗಿ ವಿಭಾಗ ಮಟ್ಟದಲ್ಲಿ ಐಸಿಡಿಎಸ್ ಶಾಖೆಯಲ್ಲಿ ಕೈಗೊಂಡಿರುವ ಪ್ರಗತಿ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಶನಿವಾರವೂ ಸಭೆ ಮುಂದುವರಿಯಲಿದೆ.

ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್, ಇಲಾಖೆಯ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ರಾಘವೇಂದ್ರ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಎಚ್.ನಿಶ್ಚಲ್ ಮತ್ತಿತರರು ಹಾಜರಿದ್ದರು.

‘ದೂರು ನಿಜವಾದರೆ ಸಹಿಸಲ್ಲ’

‘ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿ ತಲುಪಬೇಕು. ಅನೇಕ ಕಡೆ ಮಕ್ಕಳಿಗೆ ಸರಿಯಾಗಿ ಮೊಟ್ಟೆ ತಲುಪುತ್ತಿಲ್ಲ. ಹಾಲಿನ ಪೌಡರ್ ಮಾರಿಕೊಳ್ಳುತ್ತಾರೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ಅದು ನಿಜವಾಗಿದ್ದಲ್ಲಿ ಸಹಿಸಿಕೊಳ್ಳುವುದಿಲ್ಲ. ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.