ಬೀದರ್: ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ತನ್ನ ತಪ್ಪು ಸರಿಪಡಿಸಿಕೊಂಡಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮಠಾಣೆ ಹೇಳಿದ್ದಾರೆ.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರೆ ತಕ್ಕ ಪಾಠ ಕಲಿಸುವ ಕುರಿತು ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಧ್ವನಿ ಎತ್ತಿದ್ದರು. ನಾಡಿನ ಮಠಾಧೀಶರು ಕೂಡ ಇದೇ ಮಾತು ಹೇಳಿದ್ದರು. ಬಿಜೆಪಿ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿರುವುದಕ್ಕೆ ಸಮಾಜದ ಎಚ್ಚರಿಕೆ ಸಂದೇಶವೇ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಸಮಾಜಕ್ಕೆ ಅನ್ಯಾಯವಾಗುವುದನ್ನು ಯಾವುದೇ ಕಾರಣಕ್ಕೂ ಮಹಾಸಭಾ ಸಹಿಸುವುದಿಲ್ಲ. ಬೊಮ್ಮಾಯಿ ಅವರಿಗೆ ಉಳಿದ ಸಂಪೂರ್ಣ ಅವಧಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.