ಭಾನುವಾರ, ನವೆಂಬರ್ 28, 2021
19 °C
ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ ಹೇಳಿಕೆ

ಅಲ್ಪಸಂಖ್ಯಾತರಿಗೆ ಅಧಿಕ ಸೌಲಭ್ಯ ಕಲ್ಪಿಸಿದ ಬಿಜೆಪಿ: ರಾಜ್ಯ ಹಜ್ ಸಮಿತಿ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬಿಜೆಪಿ ಅಲ್ಪಸಂಖ್ಯಾತರಿಗೆ ಅಧಿಕ ಸೌಲಭ್ಯ ಕಲ್ಪಿಸಿದೆ ಎಂದು ರಾಜ್ಯ ಹಜ್ ಸಮಿತಿಯ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ ಹೇಳಿದರು.

ಇಲ್ಲಿಯ ಬಿಜೆಪಿ ನಗರ ಮಂಡಲ ಕಚೇರಿಯಲ್ಲಿ ಆಯೋಜಿಸಿದ್ದ ನಗರ ಮಂಡಲ ಅಲ್ಪಸಂಖ್ಯಾತರ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಬಿಜೆಪಿ ಜಾತಿವಾದ ಮಾಡದೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಪಕ್ಷವಾಗಿದೆ. ಕಾರ್ಯಕರ್ತರು ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ಮಾಡಿದರು.

ಕಲಬುರ್ಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಮಾತನಾಡಿ, ವಿಶ್ವದಲ್ಲೇ ಕೋವಿಡ್ ಲಸಿಕಾಕರಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ದೇಶದಲ್ಲಿ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಕೊಡಲಾಗಿದೆ ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ, ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ ಮಾತನಾಡಿದರು.

ಮುಖಂಡ ಎನ್.ಆರ್. ವರ್ಮಾ, ಅಲ್ಪಸಂಖ್ಯಾತರ ಮೋರ್ಚಾ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಎಂ.ಡಿ. ಮೊಯಿಜೊದ್ದಿನ್, ಎಂ.ಎಂ. ಅಖಿಲ್ (ಅಫ್ರೋಜ್), ಪ್ರಧಾನ ಕಾರ್ಯದರ್ಶಿ ಜೊನಾಥನ್ ಬಿನ್ ನರೇಂದ್ರ ಹೊಸಮನಿ, ನಗರ ಘಟಕದ ಅಧ್ಯಕ್ಷ ಸಮಿಯೊದ್ದಿನ್, ಉಪಾಧ್ಯಕ್ಷ ಮಹಮ್ಮದ್ ಮುದಸ್ಸಿರ್ ಅಬುಬಕರ್, ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ, ಪ್ರಶಾಂತ ಗುತ್ತೇದಾರ್ ಉಪಸ್ಥಿತರಿದ್ದರು. ಜೇಸನ್ ಮೋಡಿ ನಿರೂಪಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು