ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪ್ರದಕ್ಷಿಣೆ ಹಾಕಿ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ; ಸರ್ಕಾರಿ ಶಾಲೆಯಲ್ಲಿ ರಾಮಚಂದ್ರನ್‌ ಆರ್‌. ವಾಸ್ತವ್ಯ
Last Updated 23 ಫೆಬ್ರುವರಿ 2021, 3:35 IST
ಅಕ್ಷರ ಗಾತ್ರ

ಕಮಲನಗರ: ‘ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಅವರು ಸಂಗಮ ಗ್ರಾಮದ ನಯಾಆಬಾದಿಗೆ ತೆರಳಿ ಜನರ ಅಹವಾಲು ಸ್ವೀಕರಿಸಿದರು.

ಗ್ರಾಮದ ಓಣಿಗಳಲ್ಲಿ ಸುತ್ತಾಡಿ ರಸ್ತೆ, ಗಟಾರು ಹಾಗೂ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆಯ ಮಾಹಿತಿ ಪಡೆದರು.

‘ಜಿಲ್ಲಾಡಳಿತವೇ ಗ್ರಾಮಕ್ಕೆ ಬಂದಿರುವ ಕಾರಣ ಗ್ರಾಮ ಇನ್ನಷ್ಟು ಅಭಿವೃದ್ಧಿ ಕಾಣುವ ವಿಶ್ವಾಸ ಮೂಡಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸಮಸ್ಯೆಗಳು ಇತ್ಯರ್ಥವಾಗಲಿವೆ’ ಎಂದು ಗ್ರಾಮಸ್ಥ ರಾದ ಪರಮೇಶ್ವರ ಹೊಳಸಂಬ್ರೆ, ಮಲ್ಲಿಕಾರ್ಜುನ ದುಬಲಗುಂಡೆ, ಸಂಗಮೇಶ್ವರ ಸರಬಾರೆ, ಸಂತೋಷ ಬಿರಾದಾರ ಹೇಳಿದರು.

ರಾಮಚಂದ್ರನ್ ಮಾತನಾಡಿ, ‘ನಮ್ಮನ್ನು ಆತ್ಮೀಯವಾಗಿ ಬರಮಾಡಿಕೊಂಡಿವುದು ಖುಷಿ ಉಂಟು ಮಾಡಿದೆ. ಈ ಮೂಲಕ ನಮ್ಮ ಜವಾಬ್ದಾರಿಯೂ ಹೆಚ್ಚಿದೆ. ಎಲ್ಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

ತಾಲ್ಲೂಕಿನ ಸಂಗಮ ಗ್ರಾಮಕ್ಕೆ ಬಂದ ಜಿಲ್ಲಾಧಿಕಾರಿ ರಾಮಚಂದ್ರನ್‌ ಹಾಗೂ ಅಧಿಕಾರಿಗಳನ್ನು ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ ವಿದ್ಯಾರ್ಥಿಗಳು ಡಂಬಲ್ಸ್‌ ಹಾಗೂ ಲೇಜಿಂ ಆಡುವ ಮೂಲಕ ಬರ ಮಾಡಿಕೊಂಡರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿ.ಜಿ.ರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಸಂಗೀತಾ ಬಿರಾದಾರ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ, ಟಿಎಚ್‍ಒ ಡಾ.ಶರಣಯ್ಯ ಮಠಪತಿ, ಎಇಇ ಸೈಯದ್ ಫಸಲ್, ರವಿಕುಮಾರ ಕಾರಭರಿ, ಉಪ ತಹಶೀಲ್ದಾರ್ ಗೋಪಾಲಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT