ಬೀದರ್: ಪಡಿತರ ಚೀಟಿಯಲ್ಲಿ ಹೆಸರಿರುವ ಕುಟುಂಬ ಸದಸ್ಯರೆಲ್ಲರೂ ನ್ಯಾಯಬೆಲೆ ಅಂಗಡಿಗೆ ತೆರಳಿ ಆಧಾರ್ ವಿವರ ದೃಢೀಕರಿಸುವ ಕಾರ್ಯ ಮರು ಪ್ರಾರಂಭಿಸಲಾಗಿದೆ. ಈ ಇ-ಕೆವೈಸಿ ಕಾರ್ಯವು ಅಕ್ಟೊಂಬರ್ ಅಂತ್ಯದ ವರೆಗೂ ಚಾಲ್ತಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ತಿಳಿಸಿದ್ದಾರೆ.

ಇ-ಕೆವೈಸಿ ಮಾಡುವಾಗ ಪಡಿತರ ಚೀಟಿದಾರರು ಕೆಲವು ಅಂಶಗಳನ್ನು ಆಹಾರ ಇಲಾಖೆಯ ತಂತ್ರಾಂಶದಲ್ಲಿ ನಮೂದಿಸಲು ಅಕ್ಟೋಬರ್ 31ರವರೆಗೆ ಅವಕಾಶವಿದೆ.

ಈ ಕೈವೈಸಿ ಕಾರ್ಯದಲ್ಲಿ ಬಯೊ ದೃಢಿಕರಣ (ಬೆರಳಚ್ಚು ಹೊಂದಾಣಿಕೆ), ಪಡಿತರ ಚೀಟಿಯಲ್ಲಿ ಕುಟುಂಬದ ಹಿರಿಯ ಮಹಿಳೆಯನ್ನು ಕಡ್ಡಾಯವಾಗಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡುವುದು. ನಂತರ ಪಡಿತರ ಚೀಟಿಯಲ್ಲಿನ ಹಿರಿಯ ಮಹಿಳೆಗೆ ಕುಟುಂಬದ ಸದಸ್ಯರು ಆಗುವ ಸಂಬಂಧ ಸರಿಪಡಿಸುವುದು., ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪಡಿತರ ಚೀಟಿದಾರರು ತಮ್ಮ ಕುಟುಂಬದ ಒಬ್ಬ ಸದಸ್ಯರ ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಪಡಿತರ ಚೀಟಿಯಲ್ಲಿನ ಸದಸ್ಯರು ಅಡುಗೆ ಅನಿಲ ಸಂಪರ್ಕ (ಗ್ಯಾಸ್ ಸಿಲಿಂಡರ್) ಹೊಂದಿರುವ ಮಾಹಿತಿ ಸಲ್ಲಿಸಬೇಕು. ಸದಸ್ಯರು ಹೊಂದಿರುವ ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ಸಲ್ಲಿಸಬೇಕು., ಯಾವುದೇ ಪಡಿತರ ಚೀಟಿಯಲ್ಲಿನ ಸದಸ್ಯರು ಮರಣ ಹೊಂದಿರುವ, ವಯೋವೃದ್ಧ, ಕುಷ್ಠರೋಗ ಮತ್ತು ಇತ್ಯಾದಿ ಕಾರಣಗಳಿಂದಾಗಿ ಬೆರಳಚ್ಚು ಹೊಂದಾಣಿಕೆ ಮಾಡಲು ಮತ್ತು ಬರಲು ಆಗದೇ ಇದ್ದಲ್ಲಿ ಮಾಹಿತಿ ನೀಡಬೇಕು.

ಇ-ಕೆವೈಸಿ ಸಂಗ್ರಹಣೆಯ ಕಾರ್ಯ ಪ್ರತಿ ದಿನ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಈ ಪ್ರಕ್ರಿಯೆಗೆ ಯಾವುದೇ ಹಣ ಸಂದಾಯ ಮಾಡುವ ಅವಶ್ಯಕತೆ ಇಲ್ಲ. ಇದೂ ಸಂಪೂರ್ಣ ಉಚಿತವಾಗಿದೆ.
ಇ-ಕೆವೈಸಿ ಆಗದ ಪಡಿತರ ಚೀಟಿಯಲ್ಲಿಯ ಸದಸ್ಯರಿಗೆ ಮುಂಬರುವ ದಿನಗಳಲ್ಲಿ ಪಡಿತರ ಧಾನ್ಯ ಲಭ್ಯವಾಗದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.