ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದರ್ಶ ಶಿಕ್ಷಕರಿಂದ ಶಿಕ್ಷಣದ ವಿಕಾಸ ಸಾಧ್ಯ

Last Updated 2 ನವೆಂಬರ್ 2021, 15:03 IST
ಅಕ್ಷರ ಗಾತ್ರ

ಬೀದರ್: ಆದರ್ಶ ಶಿಕ್ಷಕರಿಂದ ಶಿಕ್ಷಣ ಕ್ಷೇತ್ರದ ವಿಕಾಸ ಸಾಧ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ವಿಷಯ ಸಂಯೋಜಕ ಸಂಜುಕುಮಾರ ಮಾಣೂರೆ ಹೇಳಿದರು.

ಇಲ್ಲಿಯ ಸರಸ್ವತಿ ಶಾಲೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಘಟಕದ ವತಿಯಿಂದ ನಡೆದ ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದಾಗಿದೆ ಎಂದು ತಿಳಿಸಿದರು.
ಪ್ರಮುಖರಾದ ನಾಗೇಶ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಮಾತನಾಡಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸೇಡಂನ ಶ್ರೀ ಕೊತ್ತಲ ಬಸವೇಶ್ವರ ಶಾಲೆಯ ಶಿಕ್ಷಕ ರಾಜಶೇಖರ ವಣಕೇರಿ ಉಪನ್ಯಾಸ ನೀಡಿದರು. ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರದ ಸಹ ಸಂಘಟನಾ ಕಾರ್ಯದರ್ಶಿ ಜಿ.ಆರ್. ಜಗದೀಶ್ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.

ವಿದ್ಯಾಭಾರತಿ ಕರ್ನಾಟಕದ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ. ಎಸ್.ಬಿ. ಸಜ್ಜನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಕಾರ್ಯದರ್ಶಿ ಭಗುಸಿಂಗ್ ಜಾಧವ್ ಸ್ವಾಗತಿಸಿದರು. ಪ್ರತಿಭಾ ಚಾಮಾ ನಿರೂಪಿಸಿದರು. ಸಹ ಕಾರ್ಯದರ್ಶಿ ಮರುಳಾರಾಧ್ಯ ವಂದಿಸಿದರು.

ಜಿಲ್ಲೆಯ 28 ಶಾಲೆಗಳ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT