ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ನಿಂದ ಬೆಂಗಳೂರಿಗೆ ಹಾರಿದ ಲೋಹದ ಹಕ್ಕಿ

ಕಲ್ಯಾಣ ಕರ್ನಾಟಕದ ಎರಡನೇ ವಿಮಾನ ನಿಲ್ದಾಣ ಉದ್ಘಾಟನೆ
Last Updated 7 ಫೆಬ್ರುವರಿ 2020, 14:58 IST
ಅಕ್ಷರ ಗಾತ್ರ

ಬೀದರ್: ಕಲ್ಯಾಣ ಕರ್ನಾಟಕದ ಎರಡನೇ ವಿಮಾನ ನಿಲ್ದಾಣ ಹಾಗೂ ನಾಗರಿಕ ವಿಮಾನ ಯಾನ ಸೇವೆಗೆ ನಗರದಲ್ಲಿ ಶುಕ್ರವಾರ ಚಾಲನೆ ದೊರೆಯಿತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುಂಡಿ ಒತ್ತಿ ನಾಮಫಲಕ ಅನಾವರಣಗೊಳಿಸುವ ಮೂಲಕ ನಾಗರಿಕ ವಿಮಾನ ನಿಲ್ದಾಣ ಉದ್ಘಾಟಿಸಿದರು. ಟ್ರುಜೆಟ್‌ ವಿಮಾನ ಹಾರಾಟಕ್ಕೂ ಚಾಲನೆ ನೀಡಿದರು.

‘ಮೊದಲು ಬೆಂಗಳೂರಿನಿಂದ ಬೀದರ್‌ಗೆ ಬರಲು ಹಾಗೂ ಇಲ್ಲಿ ಕಾರ್ಯಕ್ರಮ ಆಯೋಜಿಸಲು ಯೋಚನೆ ಮಾಡುವಂತಹ ಸ್ಥಿತಿ ಇತ್ತು. ಇದೀಗ ಬೀದರ್ ಹಾಗೂ ಬೆಂಗಳೂರು ನಡುವಿನ ಅಂತರ ಕಡಿಮೆಯಾಗಿದೆ. ಅನೇಕ ಬಗೆಯ ಗೊಂದಲಗಳು ನಿವಾರಣೆಯಾಗಿವೆ’ ಎಂದು ಹೇಳಿದರು.

‘ನಾಗರಿಕ ವಿಮಾನಯಾನ ಸೇವೆಯಿಂದ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗಲಿದೆ. ಕೈಗಾರಿಕೋದ್ಯಮ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರು ಪಕ್ಷಬೇಧ ಮೆರೆತು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಅಭಿನಂದನೀಯ’ ಎಂದರು.

ಪಶು ಸಂಗೋಪನೆ ಸಚಿವ ಪ್ರಭು ಚವಾಣ್‌, ಸಂಸದ ಭಗವಂತ ಖೂಬಾ ಮಾತನಾಡಿದರು. ಶಾಸಕ ರಹೀಂ ಖಾನ್ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಶಾಸಕರಾದ ರಾಜಶೇಖರ ಪಾಟೀಲ, ಈಶ್ವರ ಖಂಡ್ರೆ, ಬಂಡೆಪ್ಪ ಕಾಶೆಂಪೂರ, ಬಿ.ನಾರಾಯಣರಾವ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್‌ ಮಲ್ಕಾಪೂರೆ, ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಹಾಗೂ ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಇದ್ದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬೆಂಗಳೂರಿನಿಂದ ಮಧ್ಯಾಹ್ನ ಟ್ರುಜೆಟ್‌ ವಿಮಾನದಲ್ಲಿ ಬೀದರ್‌ಗೆ ಬಂದು, ಸಂಜೆ ಅದೇ ವಿಮಾನದಲ್ಲಿ ಬೆಂಗಳೂರಿಗೆ ಮರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT