ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆ ಬೀಗ ಮುರಿದು ₹3.50 ಲಕ್ಷ ಮೌಲ್ಯದ ವಸ್ತು ಕಳವು

Published 28 ಜನವರಿ 2024, 16:10 IST
Last Updated 28 ಜನವರಿ 2024, 16:10 IST
ಅಕ್ಷರ ಗಾತ್ರ

ಬೀದರ್: ಕಳ್ಳರು ನಗರದ ಬುತ್ತಿ ಬಸವಣ್ಣ ದೇವಸ್ಥಾನದ ಹತ್ತಿರದ ಮನೆಯೊಂದರ ಬೀಗ ಮುರಿದು ಸುಮಾರು ₹3.50 ಲಕ್ಷ ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

ಮನೆಯವರು ಬೀಗ ಹಾಕಿ ಸಂಬಂಧಿಕರ ಊರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ನೋಡಿ ಬೀಗ ಹಾಗೂ ಬೀರುವಿನಲ್ಲಿನ ಮತ್ತು ಮನೆಯಲ್ಲಿಯ ₹3.50 ಲಕ್ಷ ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ ಎಂದು ಮನೆ ಯಜಮಾನಿ ಚನ್ನಮ್ಮ ನೀಡಿದ ದೂರಿನ ಮೇರೆಗೆ ಚಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT