ಶನಿವಾರ, ಏಪ್ರಿಲ್ 4, 2020
19 °C

ಭಗತ್‍ಸಿಂಗ್ ಹುತಾತ್ಮ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೊರೊನಾ ಸೋಂಕಿನ ಪ್ರಯುಕ್ತ ನಗರದಲ್ಲಿ ಭಗತ್‍ಸಿಂಗ್, ಸುಖ್‍ದೇವ್ ಹಾಗೂ ರಾಜಗುರು ಅವರ ಹುತಾತ್ಮ ದಿನವನ್ನು ಸೋಮವಾರ ಸಾಂಕೇತಿಕವಾಗಿ ಆಚರಿಸಲಾಯಿತು.

ಭಗತ್‍ಸಿಂಗ್ ವೃತ್ತದಲ್ಲಿನ ಪುತ್ಥಳಿಗೆ ಪೂಜೆ ಸಲ್ಲಿಸಿ, ಹೂಮಾಲೆ ಹಾಕಿ ಗೌರವ ಸಲ್ಲಿಸಲಾಯಿತು.

‘ಭಗತ್‍ಸಿಂಗ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು’ ಎಂದು ಭಗತ್‍ಸಿಂಗ್ ವೃತ್ತದ ಸಂಸ್ಥಾಪಕ ವಿಜಯಕುಮಾರ ಸೋನಾರೆ ಹೇಳಿದರು.

ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುನೀಲ ಭಾವಿಕಟ್ಟಿ, ಅಂಬೇಡ್ಕರ್ ಯುವ ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ. ಮುದಾಳೆ, ಜೈ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಮಂತ ಸಪಾಟೆ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)