ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಪ್ಪನೊಳಗೊಬ್ಬ ಅವ್ವ’ ಕೃತಿ ಬಿಡುಗಡೆ

Last Updated 13 ಆಗಸ್ಟ್ 2022, 16:32 IST
ಅಕ್ಷರ ಗಾತ್ರ

ಬೀದರ್: ಸಾಹಿತಿ ಪಾರ್ವತಿ ವಿ. ಸೋನಾರೆ ಅವರ ಅಪ್ಪನೊಳಗೊಬ್ಬ ಅವ್ವ ಕೃತಿಯನ್ನು ಸಾಹಿತಿ ಸುಚೇಂದ್ರ ಪ್ರಸಾದ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಬಿಡುಗಡೆ ಮಾಡಿದರು.

ಸಮಾಜ ಮುಖಿ ಸಾಹಿತ್ಯ ರಚನೆ ಹೆಚ್ಚು ಅವಶ್ಯಕವಾಗಿದೆ ಎಂದು ಅವರು ಹೇಳಿದರು.

ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರು ಕೃತಿಯ ಪರಿಚಯ ಮಾಡಿಕೊಟ್ಟರು.ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಚಿಂತಕಿ ಗುರಮ್ಮ ಸಿದ್ದಾರೆಡ್ಡಿ, ಲೇಖಕಿ ಪಾರ್ವತಿ ಸೋನಾರೆ, ಶ್ರೀನಿವಾಸ ಜಿ. ಕಪ್ಪಣ್ಣ ಮಾತನಾಡಿದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಜಿ.ಕೆ. ಫೌಂಡೇಷನ್ ಅಧ್ಯಕ್ಷ ಗುರುನಾಥ ಕೊಳ್ಳೂರು, ಜೆ.ಎನ್. ಡಪಳಾಪುರ ಉಪಸ್ಥಿತರಿದ್ದರು. ಶಿವಕುಮಾರ ಕಟ್ಟೆ ಸ್ವಾಗತಿಸಿದರು. ಡಿಂಗ್ರಿ ನರೇಶ ನಿರೂಪಿಸಿದರು. ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT