ಶುಕ್ರವಾರ, ಮಾರ್ಚ್ 24, 2023
22 °C
ಬೀದರ್‌ ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ ಅಭಿಮತ

ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ’ ಎಂದು ಬೀದರ್‌ ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ ಅಭಿಪ್ರಾಯ ಪಟ್ಟರು.

ಪ್ರತಾಪನಗರದ ಜನಸೇವಾ ಶಾಲೆಯಲ್ಲಿ ಶನಿವಾರ ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದ ಸರ್ವಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರೇ ಪ್ರಧಾನ ಶಿಲ್ಪಿಗಳು. ಹೀಗಾಗಿ ಅವರಿಗೆ ನೀಡುವ ಗೌರವ ದೇವರ ಪೂಜೆಗೆ ಸಮಾನವಾಗಿದೆ’ ಎಂದರು.

‘ಕೋವಿಡ್ ಮಹಾಮಾರಿಗೆ ಇಡೀ ಜಗತ್ತು ಸೊರಗಿ ಹೋಗಿದೆ. ನಮ್ಮ ದೇಶಕ್ಕೂ ದೊಡ್ಡ ಆರ್ಥಿಕ ಪೆಟ್ಟು ಬಿದ್ದಿದೆ. ಅದರಲ್ಲೂ ಶಿಕ್ಷಕರ ಬದುಕು ಬಹು ಕಷ್ಟದಲ್ಲಿ ನಡೆಯುತ್ತಿದೆ’ ಎಂದು ಹೇಳಿದರು.

‘ಖಾಸಗಿ ಶಾಲಾ ಶಿಕ್ಷಕರಿಗಂತೂ ದಿಕ್ಕು ತೋಚದಂತಾಗಿದೆ. ಆದರೂ ತಮ್ಮ ವೃತ್ತಿಯನ್ನು ಮುಂದುವರೆಸಿ ಸರ್ಕಾರದ ಮಾರ್ಗದರ್ಶನ ಪಾಲಿಸುತ್ತ ವಠಾರ ಶಾಲೆಗಳನ್ನು ನಡೆಸುತ್ತ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಇವರ ಸೇವೆಗೆ ಸಮಾಜ ಉದಾರ ಪ್ರೋತ್ಸಾಹ ನೀಡಬೇಕು’ ಎಂದು ಮನವಿ ಮಾಡಿದರು.

‘ಈ ತಿಂಗಳ 7ನೇ ತಾರಿಖಿನಿಂದ ಪ್ರೌಢಶಾಲೆ ಮಕ್ಕಳು ಸ್ವ ಇಚ್ಛೆಯಿಂದ ತಮ್ಮ ತಮ್ಮ ಶಾಲೆಗಳಿಗೆ ತೆರಳಿ ಅಲ್ಲಿಯ ಶಿಕ್ಷಕರಿಂದ ಪಠ್ಯಕ್ರಮದ ವಿಚಾರವಾಗಿ ಸೂಕ್ತ ಮಾರ್ಗದರ್ಶನ ಪಡೆದುಕೊಂಡು ಮನೆಯಲ್ಲೇ ಅಧ್ಯಯನ ಮುಂದುವರೆಸಬೇಕಿದೆ’ ಎಂದು ತಿಳಿಸಿದರು.

ಶಾಲೆಯ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಪ್ರಾಸ್ತಾವಿಕ ಮಾತನಾಡಿ, ‘ಸೋಮವಾರದಿಂದ ನಮ್ಮ ಶಾಲೆಯಲ್ಲಿ ವಠಾರ ತರಗತಿ ನಡೆಸಲು ನಿರ್ಧರಿಸಲಾಗಿದೆ. ಕೋವಿಡ್ ಮಹಾಮಾರಿಗಯಲ್ಲೂ ನಮ್ಮ ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಿ ಶಿಕ್ಷಣ ಕ್ರಮ ಪ್ರಬುದ್ಧವಾಗಿಸಿದ್ದಾರೆ’ ಎಂದರು.

ಶಾಲೆಯ ಅಡಳಿತಧಿಕಾರಿ ಸೌಭಾಗ್ಯವತಿ ಮಾತನಾಡಿದರು. ಶಾಲೆಯ ನಿದೇಶಕ ಶಿವಲಿಂಗಪ್ಪ ಜಲಾದೆ ಹಾಗೂ ಬಿ.ಆರ್.ಸಿ ವಿಜಯಕುಮಾರ ಇದ್ದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಸನ್ಮಾನಿಸಿ, ಕಾಣಿಕೆ ನೀಡಿದರು. ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಪ್ರತಿಕ್ಷಾ ವಂದಿಸಿದರು. ಶಾಲೆಯ ಅಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಸೇರಿ ಕಾರ್ಯಕ್ರಮ ಆಯೋಜಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು