ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‍ಎಸ್‍ಎಸ್ ಪಾತ್ರ ಮಹತ್ವದ್ದು: ಎಸ್.ಜಿ. ಹುಗ್ಗಿ ಪಾಟೀಲ

ಏಳು ದಿನಗಳ ವಿಶೇಷ ಶಿಬಿರ
Last Updated 6 ಮೇ 2022, 15:22 IST
ಅಕ್ಷರ ಗಾತ್ರ

ಬೀದರ್: ‘ಸದೃಢ ರಾಷ್ಟ್ರ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಮಹತ್ವದ್ದಾಗಿದೆ’ ಎಂದು ಪ್ರಾಚಾರ್ಯ ಎಸ್.ಜಿ. ಹುಗ್ಗಿ ಪಾಟೀಲ ಹೇಳಿದರು.

ಇಲ್ಲಿಯ ಅಕ್ಕ ಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸಮಾನತೆ, ಭಾವೈಕ್ಯತೆ ಬೆಳೆಸುತ್ತದೆ. ಸಾಮಾಜಿಕ ಹೊಣೆಗಾರಿಕೆ, ಶಿಸ್ತು, ಸಂಯಮ, ಸಮಯ ಪ್ರಜ್ಞೆಯನ್ನೂ ಕಲಿಸಿಕೊಡುತ್ತದೆ ಎಂದು ತಿಳಿಸಿದರು.

ಉದ್ಘಾಟನೆ ನೆರವೇರಿಸಿದ ಅಷ್ಟೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಂಟೆಪ್ಪ ಮಾತನಾಡಿ,‘ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡುತ್ತದೆ’ ಎಂದು ಹೇಳಿದರು.

ಪ್ರಸ್ತುತ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಿ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ವಿಜಯಕುಮಾರ ಬಿರಾದಾರ ಮಾತನಾಡಿದರು. ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆಡಳಿತಾಧಿಕಾರಿ ಪೀಟರ್ ಉಪಸ್ಥಿತರಿದ್ದರು.

ಎನ್.ಎಸ್.ಎಸ್ ಅಧಿಕಾರಿ ಡಾ. ಧನಲಕ್ಷ್ಮಿ ಪಾಟೀಲ ನಿರೂಪಿಸಿದರು. ಎನ್.ಎಸ್.ಎಸ್ ಬ ಘಟಕದ ಅಧಿಕಾರಿ ಡಾ. ಮಂಜು ವಂದಿಸಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಸಂಚಾಲಿತ ಅಕ್ಕ ಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆಶ್ರಯದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT